ರಾಯಚೂರು : ಸದ್ಯ ರಾಜ್ಯದಲ್ಲಿ ವಾಲ್ಮೀಕಿ ಹಗರಣ ಹಾಗೂ ಮುಡಾ ಹಗರಣ ರಾಜ ಸರ್ಕಾರಕ್ಕೆ ತೀವ್ರ ಮುಜುಗರ ಉಂಟುಮಾಡಿದೆ ಎನ್ನಲಾಗುತ್ತಿದೆ. ಹಗರಣಗಳಿಗೆ ಸಂಬಂಧಿಸಿದಂತೆ ಈಡಿ ಅಧಿಕಾರಿಗಳು ಮತ್ತೊಂದು ಹೆಜ್ಜೆ ಮುಂದೆ ಇಟ್ಟಿದ್ದು, ರಾಯಚೂರಿನಲ್ಲಿ ಮಹತ್ವದ ದಾಖಲೆ ಕಲೆ ಹಾಕಿದ್ದಾರೆ. ಸುಮಾರು 4 ಕೋಟಿ ರೂಪಾಯಿ ಹಣದ ರಹಸ್ಯ ಭೇದಿಸಿದ್ದಾರೆ.
ಹೌದು ವಾಲ್ಮೀಕಿ ನಿಗಮದ ಹಗರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಶಾಸಕ, ನಿಗದಮ ಅಧ್ಯಕ್ಷ ಬಸನಗೌಡ ದದ್ದಲ್ ಸಂಬಂಧಿ ಕಾರ್ತಿಕ್ ಮೂಲಕ ಸುಮಾರು 4 ಕೋಟಿ ರೂಪಾಯಿ ವ್ಯವಹಾರ ನಡೆದಿರುವುದನ್ನು ಇಡಿ ಪತ್ತೆ ಮಾಡಿದೆ ಎಂದು ಬಲ್ಲ ಮೂಲಗಳಿಂದ ತಿಳಿದುಬಂದಿದೆ.
ರಾಯಚೂರು ತಾಲೂಕಿನ ಆಸ್ಕಿಹಾಳ ಗ್ರಾಮದಲ್ಲಿ ದದ್ದಲ್ ಸಂಬಂಧಿ ಕಾರ್ತಿಕ್ ಎಂಬಾತ ಲಕ್ಷ್ಮೀದೇವಿ ಎಂಬ ಮಹಿಳೆಯಿಂದ 4 ಕೋಟಿ ರೂಪಾಯಿ ಕೊಟ್ಟು ಜಮೀನು ಖರೀದಿ ಮಾಡಿದ್ದ. ಕಾರ್ತಿಕ್, ಆಂಜನೇಯ ಎಂಬುವರ ಹೆಸರಿನಲ್ಲಿ ಜಮೀನು ನೋಂದಣಿಯಾಗಿದೆ. ಲಕ್ಷ್ಮೀದೇವಿಗೆ 25 ಲಕ್ಷ ಮೊತ್ತದ 3 ಚೆಕ್ಗಳನ್ನು ಕಾರ್ತಿಕ್, ಆಂಜನೇಯ ನೀಡಿದ್ದರು. ಉಳಿದ ಹಣವನ್ನ ನಗದು ರೂಪದಲ್ಲಿ ನೀಡಲಾಗಿತ್ತು ಎನ್ನಲಾಗಿದೆ. ಇದೀಗ ಲಕ್ಷ್ಮೀದೇವಿಗೆ ಸಂಕಷ್ಟ ಎದುರಾಗಿದೆ.