ಬೆಂಗಳೂರು : ಮಂಗಳೂರು ಸಿಸಿಬಿ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿದ್ದು, ರಾಜ್ಯದ ಇತಿಹಾಸದಲ್ಲೇ ಅತಿದೊಡ್ಡ ಡ್ರಗ್ಸ್ ಸೀಜ್ ಮಾಡಿದ್ದಾರೆ.
ಬೆಂಗಳೂರಿನಲ್ಲಿ 37.5 ಕೆಜಿ ಎಂಡಿಎಂಎ ಡ್ರಗ್ಸ್ ಸೀಜ್ ಮಾಡಲಾಗಿದ್ದು, ಇದರ ಮೌಲ್ಯ ಬರೋಬ್ಬರಿ 74 ಕೋಟಿ ರೂ. ಎನ್ನಲಾಗಿದೆ. ಪ್ರಕರಣ ಸಂಬಂಧ ಪೊಲೀಸರು ಇಬ್ಬರು ವಿದೇಶಿ ಪ್ರಜೆಗಳನ್ನು ಬಂಧಿಸಿದ್ದಾರೆ.
ಕಳೆದ 5 ತಿಂಗಳಲ್ಲಿ ನಡೆದ ಕಾರ್ಯಾಚಾರಣೆಯಲ್ಲಿ ಭಾರಿ ಪ್ರಮಾಣ ಮಾದಕ ವಸ್ತುಗಳನ್ನು ವಶಕ್ಕೆ ಪಡೆಯಲಾಗಿದ್ದು, ಡ್ರಗ್ಸ್ ಮಾರುತ್ತಿದ್ದ ವಿದೇಶಿ ಮಾತ್ರೆಗಳನ್ನು ಪ್ರಜೆಗಳನ್ನು ಬಂಧಿಸಲಾಗಿದೆ. ದೆಹಲಿಯ ಲ್ಯಾಬ್ ನಲ್ಲಿ ಎಂಡಿಎಂ ತಯಾರಿಸಲಾಗುತ್ತಿತ್ತು. ಅವುಗಳನ್ನು ವಾರಕ್ಕೊಮ್ಮೆ ಬೆಂಗಳೂರು, ಮಂಗಳೂರು ಸೇರಿದಂತೆ ವಿವಿಧೆಡೆ ಸಾಗಾಟ ಮಾಡಲಾಗುತ್ತಿತ್ತು ಎನ್ನಲಾಗಿದೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.