ಬೆಂಗಳೂರು: ಬೆಂಗಳೂರು ಗ್ರಾಮಾಂತರ ಜಿಲ್ಲೆ ನೆಲಮಂಗಲ ತಾಲೂಕಿನ ದಾಬಸ್ ಪೇಟೆ ಬಳಿ ಹಿಟ್ ಅಂಡ್ ರನ್ ಗೆ ಬೈಕ್ ಸವಾರ ಸಾವನ್ನಪ್ಪಿರುವ ಘಟನೆ ನಡೆದಿದೆ.
ಬೈಕ್ ನಲ್ಲಿ ಕೆಲಸಕ್ಕೆ ಹೋಗುತ್ತಿದ್ ವೇಳೆ ಅಪರಿಚಿತ ವಾಹನ ಡಿಕ್ಕಿಯಾಗಿ ತುಮಕೂರಿನ ನವಿಲಹಳ್ಳಿ ನಿವಾಸಿ ಹನುಮಂತರಾಜು(40) ಮೃತಪಟ್ಟಿದ್ದಾರೆ.
ಅಪರಿಚಿತ ವಾಹನ ಡಿಕ್ಕಿ ಹೊಡೆದ ಪರಿಣಾಮ ಗಂಭೀರವಾಗಿ ಗಾಯಗೊಂಡು ಹನುಮಂತರಾಜು ಮೃತಪಟ್ಟಿದ್ದಾರೆ. ನೆಲಮಂಗಲ ಸಂಚಾರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.