ಮೈಸೂರು : ಮೈಸೂರಿನಲ್ಲಿ ಬೆಳ್ಳಂ ಬೆಳಿಗ್ಗೆ ಭೀಕರವಾದ ಅಪಘಾತ ಸಂಭವಿಸಿದ್ದು, ಬೈಕ್ ನಲ್ಲಿ ಚಲಿಸುತ್ತಿದ್ದ ವೇಳೆ ಹಿಂಬದಿಯಿಂದ ಸಾರಿಗೆ ಬಸ್ ಅಡಿಕೆ ಹೊಡೆದ ಪರಿಣಾಮ ಬೈಕ್ ಸವಾರ ರಸ್ತೆ ಮೇಲೆ ಬಿದ್ದಿದ್ದಾರೆ ಈ ವೇಳೆ ತಲೆಯ ಮೇಲೆ ಹಿಂಬದಿ ಚಕ್ರ ಹರಿದು ಸವಾರ ಸ್ಥಳದಲ್ಲೇ ಸಾವನಪ್ಪಿದ್ದಾರೆ.
ಹೌದು ಮೈಸೂರಿನ ವಿವೇಕಾನಂದ ನಗರದಲ್ಲಿ ಈ ಒಂದು ಅಪಘಾತ ಸಂಭವಿಸಿದ್ದು, ಬೈಕ್ ಗೆ ಹಿಂಬದಿಯಿಂದ ಸಾರಿಗೆ ಬಸ್ ಡಿಕ್ಕಿ ಹೊಡೆದಿದೆ. ಬಸ್ ಡಿಕ್ಕಿ ರಭಸಕ್ಕೆ ಬೈಕ್ ಸವಾರ ನೆಲಕ್ಕೆ ಉರುಳಿದ್ದಾನೆ. ಈ ವೇಳೆ ಸವಾರನ ತಲೆಯ ಮೇಲೆ ಹಿಂಬದಿ ಚಕ್ರ ಹರಿದಿದೆ ಸವಾರ ಪುರುಷೋತ್ತಮಯ್ಯ (80) ಎನ್ನುವವರು ಸ್ಥಳದಲ್ಲಿ ಸಾವನ್ನಪ್ಪಿದ್ದಾರೆ.