ಬೆಂಗಳೂರು : ಬೆಂಗಳೂರಿನಲ್ಲಿ ಬಿಎಂಟಿಸಿ ಬಸ್ ಚಾಲಕರ ಅಡ್ಡಾದಿಡ್ಡಿ ಚಾಲನೆಗೆ ಯಾವಾಗ ಬ್ರೇಕ್ ಬೀಳುತ್ತೋ ಗೊತ್ತಿಲ್ಲ. ಬಿಎಂಟಿಸಿ ಯದ್ವಾತದ್ವ ಚಾಲನೆಗೆ ಅನೇಕರು ಪ್ರಾಣ ಕಳೆದುಕೊಂಡಿದ್ದಾರೆ. ಇಂದು ಕೂಡ ಬಿಎಂಟಿಸಿ ಬಸ್ ಗೆ ಬೈಕ್ ಸವಾರ ಒಬ್ಬ ಸಾವನ್ನಪ್ಪಿರುವ ಘಟನೆ ಆನೇಕಲ್ ತಾಲೂಕಿನ ಜಿಗಣಿ ಬಳಿ ನಡೆದಿದೆ.
ಹೌದು ಮುಂದೆ ತೆರಳುತ್ತಿದ್ದ ಬೈಕ್ ಗೆ ಹಿಂಬದಿಯಿಂದ ಬಸ್ ಡಿಕ್ಕಿ ಹೊಡೆದಿದೆ. ಈ ವೇಳೆ ಕೆಳಗೆ ಬಿದ್ದಿದ್ದ ಬೈಕ್ ಸವಾರನ ಮೇಲೆ ಬಿಎಂಟಿಸಿ ಬಸ್ ಹರಿದಿದೆ. ಬೈಕ್ ನಲ್ಲಿದ್ದ ಸವಾರ ಸಾವನ್ನಪ್ಪಿದ್ದು ಮೃತ ಯುವಕನ ಗುರುತು ಇದುವರೆಗೂ ಪತ್ತೆಯಾಗಿಲ್ಲ. ಆನೇಕಲ್ ತಾಲೂಕಿನ ಜಿಗಣಿ ಹಳೆ ಬಸ್ ನಿಲ್ದಾಣದ ಬಳಿ ಈ ಒಂದು ಘಟನೆ ನಡೆದಿದೆ.
ಈ ವೇಳೆ ಸ್ಥಳೀಯರು ಆಕ್ರೋಶಗೊಂಡು ಬಿಎಂಟಿಸಿ ಬಸ್ಸಿನ ಗಾಜಿನ ಗ್ಲಾಸ್ ಗಳನ್ನು ಹೊಡೆದು ಪುಡಿ ಮಾಡಿದ್ದಾರೆ. ಅಲ್ಲದೆ ಬಿಎಂಟಿಸಿ ಬಸ್ಸಿನ ಚಾಲಕನಿಗೂ ಹಿಗ್ಗಾಮುಗ್ಗ ಥಳಿಸಿದ್ದಾರೆ. ಘಟನಾ ಸ್ಥಳಕ್ಕೆ ಜಿಗಣಿ ಪೊಲೀಸ್ ಠಾಣೆಯ ಅಧಿಕಾರಿಗಳು ಬಂದು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.