ಬೆಂಗಳೂರು : ಬೈಕ್ ಮೇಲೆ ತೆರಳುತ್ತಿದ್ದ ವ್ಯಕ್ತಿಯ ಮೇಲೆ ದುಷ್ಕರ್ಮಿಗಳು ಮಚ್ಚು ಹಾಗೂ ಚಾಕುವಿನಿಂದ ಭೀಕರವಾಗಿ ಹಲ್ಲೆ ನಡೆಸಿ ದರೋಡೆ ಮಾಡಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ತಾಲೂಕಿನ ಎಡೆಹಳ್ಳಿ ಎಂಬಲ್ಲಿ ನಡೆದಿದೆ.
ಬೈಕ್ ಸವಾರನ ಮೇಲೆ ಮಚ್ಚು ಚಾಕುವಿನಿಂದ ಹಲ್ಲೆ ನಡೆಸಿ ದರೋಡೆ ಮಾಡಲಾಗಿದ್ದು,ಎಡೆ ಹಳ್ಳಿ ಬಳಿಯ ರಾಷ್ಟ್ರೀಯ ಹೆದ್ದಾರಿಯ ಬಳಿ ಸವಾರ ಕಲಂದರ ಮೇಲೆ ದುಷ್ಕರ್ಮಿಗಳು ಹಲ್ಲೆ ನಡೆಸಿದ್ದಾರೆ. ಹಲ್ಲೆಗೆ ಒಳಗಾದಂತಹ ಕಲಂದರ್ಗೆ ಸದ್ಯ ತುಮಕೂರು ಜಿಲ್ಲಾ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಘಟನೆ ಕುರಿತಂತೆ ದಾಬಸ್ ಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.