ಬೆಂಗಳೂರು : ಬೆಂಗಳೂರಿನಲ್ಲಿ ರೌಡಿಶೀಟರ್ ಬಿಕ್ಲು ಶಿವ ಕೊಲೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ನಿನ್ನೆ ಬಿಜೆಪಿ ಶಾಸಕ ಭೈರತಿ ಬಸವರಾಜ್ ಜಾಮೀನು ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿತ್ತು. ಅದರ ಬೆನ್ನಲ್ಲೇ ಶಾಸಕ ಭೈರತಿ ಬಸವರಾಜ್ ತಲೆಮರೆಸಿಕೊಂಡಿದ್ದಾರೆ.
ಇದೀಗ ಬಿಜೆಪಿ ಶಾಸಕ ಭೈರತಿ ಬಸವರಾಜ್ ಸುಪ್ರೀಂ ಕೋರ್ಟ್ ಗೆ ನಿರೀಕ್ಷಣಾ ಜಾಮೀನು ಕೋರಿ ಅರ್ಜಿ ಸಲ್ಲಿಕೆ ಮಾಡಿದ್ದಾರೆ. ರೌಡಿಶೀಟರ್ ಶಿವಪ್ರಕಾಶ್ ಅಲಿಯಾಸ್ ಬಿಕ್ಲು ಶಿವ ಕೊಲೆ ಪ್ರಕರಣದಲ್ಲಿ ನಿರೀಕ್ಷಣಾ ಜಾಮೀನು ಸಲ್ಲಿಸಿದ್ದ ಅರ್ಜಿಯನ್ನು ನಿನ್ನೆ ಹೈಕೋರ್ಟ್ ವಜಾಗೊಳಿಸಿತ್ತು. ಅದರ ಬೆನ್ನಲ್ಲೆ, ಸುಪ್ರೀಂಕೋರ್ಟ್ ಮೊರೆ ಹೋಗಿದ್ದಾರೆ.








