ಯಾದಗಿರಿ : ಈಗಾಗಲೇ ರಾಜ್ಯದಲ್ಲಿ ವಾಲ್ಮೀಕಿ ಹಗರಣ ಹಾಗೂ ಸಿಎಂ ಸಿದ್ದರಾಮಯ್ಯ ವಿರುದ್ಧ ಮುಡಾ ಹಗರಣ ಭಾರಿ ಸಂಚಲನ ಮೂಡಿಸಿದ್ದು, ಇದರ ಮಧ್ಯ ಯಾದಗಿರಿಯಲ್ಲಿ ಗ್ರಾಮ ಪಂಚಾಯಿತಿ ಪಿಡಿಒ ಅಧಿಕಾರಿಯೊಬ್ಬರು ಕೆಲಸ ಮಾಡಿಸಿಕೊಂಡು ಬಿಲ್ ಪಾವತಿಸದೆ ಸತಾಯಿಸಿದ್ದಕ್ಕೆ, ಮನನೊಂದ ಗ್ರಾಮ ಪಂಚಾಯಿತಿ ಬಿಲ್ ಕಲೆಕ್ಟರ್ ವಿಷ ಸೇವಿಸಿ ಆತ್ಮಹತ್ಯೆಗೆ ಯತಿಸಿರುವ ಘಟನೆ ಯಾದಗಿರಿ ಜಿಲ್ಲೆಯ ಸುರಪುರ ತಾಲೂಕಿನ ದೇವಾಪುರದಲ್ಲಿ ನಡೆದಿದೆ.
ಹೌದು ದೇವಾಪುರ ಗ್ರಾಮ ಪಂಚಾಯಿತಿ ಬಿಲ್ ಕಲೆಕ್ಟರ್ ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಯಾದಗಿರಿ ಜಿಲ್ಲೆಯ ಸುರಪುರ ತಾಲೂಕಿನ ದೇವಾಪುರ ಗ್ರಾಮ ಪಂಚಾಯಿತಿ ಪಿಡಿಓ, ಗ್ರಾಮ ಪಂಚಾಯಿತಿ ಅಧ್ಯಕ್ಷೆ ಕೆಲಸ ಮಾಡಿಸಿಕೊಂಡು ಹಣ ಪಾವತಿಸದಿದ್ದಕ್ಕೆ ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಮನನೊಂದು ವಿಶೇಷ ಸೇವಿಸಿ ಯಲ್ಲಪ್ಪ ಅರಳಗುಂಡಗಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ.
ಚರಂಡಿ ಸ್ವಚ್ಛತೆ ಹಾಗೂ ಇನ್ನಿತರ ಕಾರ್ಯ ಯಲ್ಲಪ್ಪ ಮಾಡಿಸಿದ್ದ. ದೇವಾಪುರ ಗ್ರಾಮ ಪಂಚಾಯಿತಿ ಪಿಡಿಓ ದೇವೇಂದ್ರಪ್ಪ ಗ್ರಾಮ ಪಂಚಾಯಿತಿ ಅಧ್ಯಕ್ಷೆ ರೇಣುಕಾ ಸೂಚನೆಯಂತೆ ಯಲ್ಲಪ್ಪ ಕೆಲಸ ಮಾಡಿಸಿದ್ದ. ಸುಮಾರು 1.5 ಲಕ್ಷ ರೂಪಾಯಿ ಖರ್ಚು ಮಾಡಿ ಯಲ್ಲಪ್ಪ ಎಲ್ಲ ಕೆಲಸವನ್ನು ಮಾಡಿಸಿದ್ದ.
ಆದರೆ ಬಿಲ್ ನ ಹಣ ಪಾವತಿಸದೆ ಪಿಡಿಒ ಹಾಗೂ ಗ್ರಾಮ ಪಂಚಾಯಿತಿ ಅಧ್ಯಕ್ಷ ಸತಾಯಿಸಿದ್ದಾರೆ. ಹಾಗಾಗಿ ಮನನೊಂದ ಬಿಲ್ ಕಲೆಕ್ಟರ್ ಯಲ್ಲಪ್ಪ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಾನೆ. ಅಸಸ್ಥಗೊಂಡ ಯಲ್ಲಪ್ಪ ಗೆ ಸುರಪುರ ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಲಾಗುತ್ತಿದೆ. ತಕ್ಷಣ ಹೆಚ್ಚಿನ ಚಿಕಿತ್ಸೆಗಾಗಿ ಕಲ್ಬುರ್ಗಿಯ ಜಿಮ್ಸ್ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ. ಸುರಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಒಂದು ಪ್ರಕರಣ ನಡೆದಿದೆ.