ಉಡುಪಿ : ಇತ್ತೀಚಿಗೆ ಆಕಸ್ಮಿಕ ಹಾಗೂ ಶಾರ್ಟ್ ಸರ್ಕ್ಯೂಟ್ ನಿಂದ ಅಗ್ನಿ ಅವಘಡಗಳು ಸಂಭವಿಸುತ್ತಲೇ ಇವೆ. ಇದೀಗ ಉಡುಪಿಯಲ್ಲಿ ಕೂಡ ಶಾರ್ಟ್ ಸರ್ಕ್ಯೂಟ್ ನಿಂದ ಬಿರಿಯಾನಿ ಹೋಟೆಲ್ ಒಂದು ಹೊತ್ತಿ ಉರಿದಿರುವ ಘಟನೆ ನಡೆದಿದೆ.
ಉಡುಪಿಯಲ್ಲಿ ಶಾರ್ಟ್ ಸರ್ಕ್ಯೂಟ್ ನಿಂದ ಬಿರಿಯಾನಿ ಹಟ್ ಹೋಟೆಲ್ ಒಂದು ಹೊತ್ತಿ ಉರಿದಿದೆ. ಕರಾವಳಿಯ ಜಂಕ್ಷನ್ ಬಳಿ ಇರುವ ಹೋಟೆಲ್ ನಲ್ಲಿ ಶಾರ್ಟ್ ಸರ್ಕ್ಯೂಟ್ ನಿಂದ ಅಗ್ನಿ ಅವಘಡ ಸಂಭವಿಸಿದ ಶಂಕೆ ವ್ಯಕ್ತವಾಗುತ್ತಿದೆ.
ತಕ್ಷಣ ಘಟನಾ ಸ್ಥಳಕ್ಕೆ ಅಗ್ನಿಶಾಮಕ ದಳ ಆಗಮಿಸಿ, ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದೆ, ಘಟನೆಯ ಕುರಿತಂತೆ, ಇದೀಗ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಪೊಲೀಸರು ತನಿಖೆಯನ್ನು ಕೈಗೊಂಡಿದ್ದಾರೆ ಎಂದು ತಿಳಿದುಬಂದಿದೆ.