ಬೆಂಗಳೂರು : ಕರ್ನಾಟಕದಲ್ಲಿ ಸಂಚಲನ ಸೃಷ್ಟಿ ಮಾಡಿದ್ದ ಬಿಟ್ ಕಾಯಿನ್ ಪ್ರಕರಣದ ಆರೋಪಿ ಶ್ರೀಕಿ ಅಲಿಯಾಸ್ ಶ್ರೀಕೃಷ್ಣನನ್ನು ಪೊಲೀಸರು ಕೊನೆಗೂ ಬಂಧಿಸಿದ್ದಾರೆ. ಬೆಂಗಳೂರು ಬಳ್ಳಾರಿ ರಸ್ತೆಯಲ್ಲಿರುವ ಖಾಸಗಿ ಹೋಟೆಲ್ ಅಲ್ಲಿ ಶ್ರೀಕಿಯನ್ನ ಬಂಧಿಸಲಾಗಿದೆ ಎಂದು ತಿಳಿದುಬಂದಿದೆ.
2017ರಲ್ಲಿ ತುಮಕೂರು ಹೊಸ ಬಡಾವಣೆ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಯುನೋ ಕಾಯಿನ್ ಕಳವು ಪ್ರಕರಣಕ್ಕೆ ಸಂಬಂಧಿಸಿದಂತೆ ಸುಮಾರು 1.14 ಲಕ್ಷ ಮೌಲ್ಯದ 60.6 ಬಿಟ್ ಕಾಯಿನ ಕಳುವು ಆಗಿರುವ ಕುರಿತು ಆರೋಪ ಕೇಳಿಬಂದಿತ್ತು. ಪ್ರೀತಿ ಲ್ಯಾಪ್ಟಾಪ್ ಪರಿಶೀಲನೆ ವೇಳೆ ಬಿಟ್ ಕಾಯಿನ್ ಕಳುವಾಗಿರುವುದು ದೃಢವಾಗಿದೆ.
ಯುನೋಕಾಯಿನ್ ಪ್ರೈ. ಲಿ. ಗ್ರಾಹಕರಿಗೆ ಈ ಬಿಟ್ ಕಾಯಿನ್ ಸೇರಿದ್ದು ಎನ್ನಲಾಗಿದೆ.ಈ ಹಿನ್ನೆಲೆಯಲ್ಲಿ ಇದೀಗ ಪ್ರಮುಖ ಆರೋಪಿಯಾದ ಶ್ರೀಕಿಯನ್ನು ಸಿಐಡಿ ವಿಶೇಷ ತನಿಖಾ ಅಧಿಕಾರಿಗಳು ಬಂಧಿಸಿದ್ದಾರೆ. ಈ ಪ್ರಕರಣ ಎಸ್ಐಟಿಗೆ ವರ್ಗಾವಣೆ ಆಗಿತ್ತು.
ಈ ಪ್ರಕರಣವನ್ನು ಸಿಸಿಬಿ ಪೊಲೀಸರು ತನಿಖೆ ನಡೆಸಿ, ಆರೋಪಿಯನ್ನು ಬಂಧಿಸಿದ್ದರು.ಬಳಿಕ ಜಾಮೀನಿನ ಮೇಲೆ ಹೊರಗಡೆ ಬಂದಿದ್ದನು. ಸಿಐಡಿ ಅಧಿಕಾರಿಗಳು ಆರೋಪಿ ಶ್ರೀಕಿ ಸಿಐಡಿ ತನಿಖೆಗೆ ಹಾಜರಾಗದೆ ಕಳ್ಳಾಟವಾಡುತ್ತಿದ್ದನು.ಸಿಐಡಿ ಪೊಲೀಸರು 5-6 ಬಾರಿ ನೋಟಿಸ್ ನೀಡಿದರೂ ಶ್ರೀಕಿ ವಿಚಾರಣೆಗೆ ಹಾಜರಾಗುತ್ತಿರಲಿಲ್ಲ. ಇದೀಗ ಸಿಐಡಿ ಅಧಿಕಾರಿಗಳು ಶ್ರೀಕಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.