ಬೆಂಗಳೂರು : ಮಹಿಳೆಯ ಮೇಲೆ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇದೀಗ ಎಸ್ಐಟಿ ಅಧಿಕಾರಿಗಳು ಪ್ರಜ್ವಲ್ ರೇವಣ್ಣ ವಿರುದ್ಧ 13, 712 ಪುಟಗಳ ಚಾರ್ಜ್ ಶೀಟ್ ಸಲ್ಲಿಕೆ ಮಾಡಿದ್ದು, ಈ ಒಂದು ಚಾರ್ಜ್ ಶೀಟ್ ನಲ್ಲಿ ಸ್ಪೋಟಕ ಅಂಶ ಬಯಲಾಗಿದೆ. ಅತ್ಯಾಚಾರ ಪ್ರಕರಣದಲ್ಲಿ ಬಿಜೆಪಿ ಮತ್ತು ಕಾಂಗ್ರೇಸ್ ಕಾರ್ಯಕರ್ತರು ಇದ್ದಾರೆ ಎನ್ನುವುದು ಚಾರ್ಜ್ ಶೀಟ್ ನಲ್ಲಿ ಬಯಲಾಗಿದೆ.
ಹೌದು ಮಾಜಿ ಸಂಸದ ಪ್ರಜ್ವಲ್ ರೇವಣ್ಣಅಶ್ಲೀಲ ವಿಡಿಯೋ ವೈರಲ್ ಪ್ರಕರಣ ಸಂಬಂಧ ಮಹತ್ವದ ಬೆಳವಣಿಗೆ ನಡೆದಿದೆ. ಪ್ರಜ್ವಲ್ ರೇವಣ್ಣ ವಿಡಿಯೋ ವೈರಲ್ ಪ್ರಕರಣದಲ್ಲಿ ಎಸ್ಐಟಿ 13,712 ಪುಟಗಳ ಬೃಹತ್ ಚಾರ್ಜ್‌ಶೀಟ್ ಸಲ್ಲಿಸಿದೆ. ಒಟ್ಟು 39 ಆರೋಪಿಗಳ ವಿರುದ್ಧ ದೋಷಾರೋಪ ಹೊರಿಸಲಾಗಿದ್ದು, ಬಿಜೆಪಿ ಮತ್ತು ಕಾಂಗ್ರೆಸ್ ಕಾರ್ಯಕರ್ತರೂ ಇದರಲ್ಲಿದ್ದಾರೆ ಎಂದು ವರದಿಯಾಗಿದೆ.
ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋಗಳಿದ್ದ ಪೆನ್‌ಡ್ರೈವ್ ಹಂಚಿಕೆ ವಿಚಾರವಾಗಿ ವಿಶೇಷ ತನಿಖಾ ತಂಡ (SIT) ಹಾಸನದ ಹಿರಿಯ ಸಿವಿಲ್ ನ್ಯಾಯಾಲಯಕ್ಕೆ ವಿವರವಾದ ಚಾರ್ಜ್‌ಶೀಟ್ ಸಲ್ಲಿಸಿದೆ. ಒಟ್ಟು 13,712 ಪುಟಗಳ ದೋಷಾರೋಪ ಪಟ್ಟಿ ಸಲ್ಲಿಸಲಾಗಿದ್ದು, ಈ ಪ್ರಕರಣದಲ್ಲಿ 52 ಜನರ ಹೆಸರು ಉಲ್ಲೇಖಿಸಲಾಗಿದೆ. ಇವರಲ್ಲಿ 39 ಜನರ ವಿರುದ್ಧ ಆರೋಪಗಳು ಸಾಬೀತಾಗಿವೆ ಎಂದು ಎಸ್ಐಟಿ ತಿಳಿಸಿದೆ.
ಈ ಪ್ರಕರಣದಲ್ಲಿ ಎ1 ನವೀನ್, ಎ2 ಪ್ರಜ್ವಲ್ ಅವರ ಕಾರು ಚಾಲಕರಾಗಿದ್ದ ಕಾರ್ತಿಕ್ ಎನ್, ಎ3 ಚೇತನ್ ಬಿಸಿ, ಎ4 ಚೇತನ್ ವೈ ಎಸ್, ಎ5 ಲಿಖಿತ್ ಗೌಡ ಸೇರಿದಂತೆ ಒಟ್ಟು 39 ಆರೋಪಿಗಳ ವಿರುದ್ಧ ದೋಷಾರೋಪಣೆ ಮಾಡಲಾಗಿದೆ. ಇವರಲ್ಲಿ ಬಿಜೆಪಿ ಹಾಗೂ ಕಾಂಗ್ರೆಸ್ ಕಾರ್ಯಕರ್ತರ ಹೆಸರುಗಳೂ ಸೇರಿವೆ. ಅದರಲ್ಲೂ ಬಿಜೆಪಿ ನಾಯಕ ಪ್ರೀತಂಗೌಡ, ಸಂಸದ ಶ್ರೇಯಸ್ ಅತ್ಯಾಪ್ತರ ವಿರುದ್ಧದ ಆರೋಪ ಸಾಬೀತುಪಡಿಸಲಾಗಿದೆ.








