ಬೆಂಗಳೂರು: ರಾಜ್ಯ ರಾಜಕೀಯದಲ್ಲಿ ತೀವ್ರ ಕುತೂಹಲ ಕೆರಳಿಸಿರುವ ಬಾಗಲಕೋಟೆ ಮತ್ತು ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಗೆ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ತನ್ನ ಅಭ್ಯರ್ಥಿಗಳನ್ನು ಅಧಿಕೃತವಾಗಿ ಘೋಷಿಸಿದೆ.
ಮಾಜಿ ಸಚಿವರಾದ ಎಚ್.ವೈ. ಮೇಟಿ ಹಾಗೂ ಹಿರಿಯ ನಾಯಕ ಶಾಮನೂರು ಶಿವಶಂಕರಪ್ಪ ಅವರ ನಿಧನದಿಂದ ತೆರವಾಗಿದ್ದ ಈ ಎರಡು ಕ್ಷೇತ್ರಗಳಿಗೆ ಏಪ್ರಿಲ್ 9, 2026 ರಂದು ಮತದಾನ ನಡೆಯಲಿದೆ. ಈ ಹಿನ್ನೆಲೆಯಲ್ಲಿ ಬಿಜೆಪಿ ಹೈಕಮಾಂಡ್ ಅಭ್ಯರ್ಥಿಗಳ ಆಯ್ಕೆಯನ್ನು ಅಂತಿಮಗೊಳಿಸಿ ಪಟ್ಟಿ ಬಿಡುಗಡೆ ಮಾಡಿದೆ.
ಬಾಗಲಕೋಟೆಯಿಂದ ವೀರಭದ್ರಯ್ಯ ಚರಂತಿಮಠ ಮತ್ತು ದಾವಣಗೆರೆ ದಕ್ಷಿಣದಿಂದ ಶ್ರೀನಿವಾಸ ಟಿ ದಾಸಕರಿಯಪ್ಪ ಅವರಿಗೆ ಟಿಕೆಟ್ ನೀಡಲಾಗಿದೆ. ಆಮೂಲಕ, ದಾವಣಗೆರೆ ಬಿಜೆಪಿ ಘಟಕಕ್ಕೆ ಕೇಂದ್ರದ ನಾಯಕರು ಅಚ್ಚರಿಯನ್ನು ಮೂಡಿಸಿದ್ದಾರೆ.








