ಬೆಂಗಳೂರು : ಅಬಕಾರಿ ಇಲಾಖೆಯಲ್ಲಿ ಕೋಟ್ಯಾಂತರ ರೂಪಾಯಿ ಹಗರಣ ನಡೆದಿರುವ ಆರೋಪಕ್ಕೆ ಸಂಬಂಧ ಪಟ್ಟಂತೆ ಸಚಿವ ತಿಮ್ಮಾಪುರ ರಾಜೀನಾಮೆಗೆ ಆಗ್ರಹಿಸಿ ವಿಧಾನಸಭೆಯಲ್ಲಿ ಬಿಜೆಪಿ-ಜೆಡಿಎಸ್ ಸದಸ್ಯರು ಅಹೋರಾತ್ರಿ ಧರಣಿಗೆ ನಿರ್ಧರಿಸಿದ್ದಾರೆ.
ಅಬಕಾರಿ ಸಚಿವ ತಿಮ್ಮಾಪುರ ರಾಜೀನಾಮೆಗೆ ವಿಪಕ್ಷಗಳು ಒತ್ತಾಯಿಸಿದ್ದು, ವಿಧಾನಸಭೆಯಲ್ಲಿ ಬಿಜೆಪಿ, ಜೆಡಿಎಸ್ ಸದಸ್ಯರು ಅಹೋರಾತ್ರಿ ಧರಣಿಗೆ ನಿರ್ಧರಿಸಿದ್ದಾರೆ. ಅಹೋರಾತ್ರಿ ಧರಣಿಗೆ ಬಗ್ಗೆ ಸಿಎಂ ಸಿದ್ದರಾಮಯ್ಯಗೆ ಅಶೋಕ್ ಪಟ್ಟಣ್ ಮಾಹಿತಿ ನೀಡಿದ್ದಾರೆ. ಸಿಎಂ ಸಿದ್ದರಾಮಯ್ಯ ವಿಧಾನಸೌಧದಿಂದ ನಿರ್ಗಮಿಸುವಾಗ ಅಹೋರಾತ್ರಿ ಧರಣಿ ಬಗ್ಗೆ ಮಾಹಿತಿ ನೀಡಲಾಗಿದೆ.
ಅಬಕಾರಿ ಇಲಾಖೆಯಲ್ಲಿ ಕೋಟ್ಯಾಂತರ ರೂಪಾಯಿ ಹಗರಣ ನಡೆದಿರುವ ಆರೋಪಕ್ಕೆ ಸಂಬಂಧ ಪಟ್ಟಂತೆ ಸಚಿವ ಆರ್ ಬಿ ತಿಮ್ಮಾಪುರ್ ಇದರಲ್ಲಿ ನನ್ನದು ಏನೂ ತಪ್ಪು ಇಲ್ಲ ನಾನು ಯಾವುದೇ ಕಾರಣಕ್ಕೂ ರಾಜೀನಾಮೆ ಕೊಡಲ್ಲ ಎಂದು ತಿಳಿಸಿದರು.








