ಬೆಂಗಳೂರು : ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ನಡೆದ ಕೋಟ್ಯಾಂತರ ರೂಪಾಯಿ ಅಕ್ರಮಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಬಳ್ಳಾರಿ ಹಾಗೂ ರಾಯಚೂರು ಕ್ಷೇತ್ರದ ಚುನಾವಣೆಗೆ ಹಣ ಬಳಕೆ ಮಾಡಲಾಗಿದೆ ಎಂದು ಆರೋಪಿಸಿ ಇದೀಗ ಬಿಜೆಪಿ ದೂರು ನೀಡಿದೆ.
ಹೌದು ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಈ ಹಣವನ್ನು ರಾಯಚೂರು ಹಾಗೂ ಬಳ್ಳಾರಿ ಚುನಾವಣೆಗೆ ಬಳಕೆ ಮಾಡಲಾಗಿದೆ ಎಂದು ಆರೋಪಿಸಿ ಕೇಂದ್ರ ಚುನಾವಣಾ ಆಯೋಗಕ್ಕೆ ರಾಜ್ಯ ಬಿಜೆಪಿ ನಾಯಕರಿಂದ ದೂರು ಸಲ್ಲಿಕೆಯಾಗಿದೆ. ರಾಜ್ಯ ಬಿಜೆಪಿ ಘಟಕದ ಅಧ್ಯಕ್ಷ ಬಿ ವೈ ವಿಜಯೇಂದ್ರ ನೇತೃತ್ವದಲ್ಲಿ ದೂರು ನೀಡಲಾಗಿದೆ.
ಈಗಾಗಲೇ ಈ ಒಂದು ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ನಡೆದಂತಹ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಮಾರು ಮೂರು ತಿಂಗಳುಗಳ ಕಾಲ ಜೈಲಿನಲ್ಲಿದ್ದ ಕಾಂಗ್ರೆಸ್ ಶಾಸಕ ಬಿ ನಾಗೇಂದ್ರ ಅವರು ಇತ್ತೀಚಿಗೆ ಜೈಲಿನಿಂದ ಬಿಡುಗಡೆಯಾಗಿದ್ದರು. ಇದೀಗ ರಾಜ್ಯ ಬಿಜೆಪಿ ನಾಯಕರು ಮತ್ತೊಂದು ಆರೋಪ ಮಾಡಿ ಕೇಂದ್ರ ಚುನಾವಣಾ ಆಯೋಗಕ್ಕೆ ದೂರು ನೀಡಿದ್ದಾರೆ.