ರಾಮನಗರ : ಕಾಂಗ್ರೆಸ್ ಸರ್ಕಾರದ ಹಗರಣಗಳ ವಿರುದ್ಧದ ಬಿಜೆಪಿ ಹಾಗೂ ಜೆಡಿಎಸ್ ಪಕ್ಷಗಳ ನೇತೃತ್ವದ ಬೃಹತ್ ಪಾದಯಾತ್ರೆ ಇಂದು ಎರಡನೇ ದಿನಕ್ಕೆ ಕಾಲಿಟ್ಟಿದ್ದು, ಬಿಡದಿಯಿಂದ ಇಂದು ಪಾದಯಾತ್ರೆ ಆರಂಭವಾಗಿದೆ.
ಇಂದು ಬೆಳಗ್ಗೆ ರಾಮನಗರ ತಾಲೂಕಿನ ಬಿಡದಿಯಿಂದ ಎರಡನೇ ದಿನದ ಪಾದಯಾತ್ರೆ ಆರಂಭವಾಗಿದ್ದು, ಬಿಜೆಪಿ-ಜೆಡಿಎಸ್ ಪಾದಯಾತ್ರೆಯಲ್ಲಿ ಸಾವಿರಾರು ಕಾರ್ಯಕರ್ತ ಭಾಗಿಯಾಗಿದ್ದು, ಬಿಜೆಪಿ-ಜೆಡಿಎಸ್ ನಾಯಕರೊಂದಿಗೆ ಹೆಜ್ಜೆ ಹಾಕುತ್ತಿದ್ದಾರೆ.
ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಯಡಿಯೂರಪ್ಪ, ವಿಧಾನ ಪರಿಷತ್ ವಿರೋಧ ಪಕ್ಷ ನಾಯಕರಾದ ಛಲವಾದಿ ನಾರಾಯಣ ಸ್ವಾಮಿ, ವಿರೋಧ ಪಕ್ಷ ಉಪ ನಾಯಕರಾದ ಅರವಿಂದ್ ಬೆಲ್ಲದ್, ಮಾಜಿ ಉಪಮುಖ್ಯಮಂತ್ರಿಗಳಾದ ಡಾ ಅಶ್ವಥ್ ನಾರಾಯಣ್, ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕರಾದ ಸಿ ಬಿ ಸುರೇಶ್ ಬಾಬು, ಮಾಜಿ ಸಚಿವರಾದ ಬಿ ಶ್ರೀರಾಮುಲು,ರಾಜ್ಯ ಪ್ರಧಾನ ಕಾರ್ಯದರ್ಶಿಗಳಾದ ಸುನೀಲ್ ಕುಮಾರ್, ರಾಜ್ಯ ಉಪಾಧ್ಯಕ್ಷರಾದ ಭೈರತಿ ಬಸವರಾಜು, ರಾಜು ಗೌಡ, ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷರಾದ ನಿಖಿಲ್ ಕುಮಾರ ಸ್ವಾಮಿ, ಸೇರಿದಂತೆ ಬಿಜೆಪಿ ಹಾಗೂ ಜೆಡಿಎಸ್ ಪಕ್ಷಗಳ ಶಾಸಕರು, ಸಂಸದರು, ಮುಖಂಡರು, ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ಹೆಜ್ಜೆ ಹಾಕುತ್ತಿದ್ದಾರೆ.