ಮಂಡ್ಯ : ಜೆಡಿಎಸ್ ಮತ್ತು ಬಿಜೆಪಿಯವರು ಹಾಲು ಜೇನಿನಂತೆ ಇದ್ದೇವೆ. ಹಾಗಾಗಿ 2028ಕ್ಕೆ ರಾಜ್ಯದಲ್ಲಿ ಜೆಡಿಎಸ್ ಬಿಜೆಪಿ ಮೈತ್ರಿ ಸರ್ಕಾರ ಬರಲಿದೆ ಎಂದು ಮಂಡ್ಯದಲ್ಲಿ ವಿಪಕ್ಷ ನಾಯಕ ಆರ್ ಅಶೋಕ್ ಸ್ಪೋಟಕವಾದ ಹೇಳಿಕೆ ನೀಡಿದರು.
ಮಂಡ್ಯದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಆರ್ ಅಶೋಕ್ ರಾಜ್ಯದಲ್ಲಿ ಬಿಜೆಪಿ ಮತ್ತು ಜೆಡಿಎಸ್ ನಡುವೆ ಯಾವುದೇ ರೀತಿಯ ಒಡಕು ಇಲ್ಲ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ 4 ತಿಂಗಳಲ್ಲಿ ಬದಲಾಗ್ತಾರೋ ಇಲ್ವೋ ಗೊತ್ತಿಲ್ಲ. ಡಿಕೆ ಶಿವಕುಮಾರ್ ಈಗಾಗಲೇ ಸಿಎಂ ಕುರ್ಚಿಗೆ ಡಬಲ್ ಹಾಕಿ ಕೂತಿದ್ದಾರೆ ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆ ಆಗುವುದಂತೂ ಸತ್ಯ ಎಂದು ಆರ್ ಅಶೋಕ್ ತಿಳಿಸಿದರು.