ನವದೆಹಲಿ: ಮುಂದಿನ ವರ್ಷ ನಡೆಯಲಿರುವ ತಮಿಳುನಾಡು ವಿಧಾನಸಭಾ ಚುನಾವಣೆಗೆ ಭಾರತೀಯ ಜನತಾ ಪಕ್ಷ (ಬಿಜೆಪಿ) ಅಖಿಲ ಭಾರತ ಅಣ್ಣಾ ದ್ರಾವಿಡ ಮುನ್ನೇತ್ರ ಕಳಗಂ (ಎಐಎಡಿಎಂಕೆ) ಯೊಂದಿಗೆ ಮೈತ್ರಿ ಮಾಡಿಕೊಂಡಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಶುಕ್ರವಾರ ಪ್ರಕಟಿಸಿದ್ದಾರೆ.
ಈ ನಡುವೆ ತಮಿಳುನಾಡು ಬಿಜೆಪಿ ಘಟಕದ ಅಧ್ಯಕ್ಷರಾಗಿ ನೈನಾರ್ ನಾಗೇಂದ್ರನ್ ಆಯ್ಕೆಯಾಗಿದ್ದಾರೆ. ತಮಿಳುನಾಡಿನ ಬಿಜೆಪಿ ಘಟಕದ ಅಧ್ಯಕ್ಷ ಸ್ಥಾನಕ್ಕೆ ಹಿರಿಯ ನಾಯಕ ನೈನಾರ್ ನಾಗೇಂದ್ರನ್ ಶುಕ್ರವಾರ ನಾಮಪತ್ರ ಸಲ್ಲಿಸಿದರು. ನಾಮಪತ್ರ ಸಲ್ಲಿಕೆ ವೇಳೆ ಬಿಜೆಪಿ ಶಾಸಕ ನಾಗೇಂದ್ರನ್ ಅವರೊಂದಿಗೆ ಹಾಲಿ ರಾಜ್ಯ ಅಧ್ಯಕ್ಷ ಕೆ.ಅಣ್ಣಾಮಲೈ ಸೇರಿದಂತೆ ಪಕ್ಷದ ಹಲವು ಪ್ರಮುಖ ನಾಯಕರು ಇದ್ದರು.
ಎಐಎಡಿಎಂಕೆಯಿಂದ ಪಕ್ಷಾಂತರ ಮಾಡಿದ ನೈನಾರ್ ನಾಗೇಂದ್ರನ್ ಅವರು ಫೈರ್ ಬ್ರಾಂಡ್ ಮಾಜಿ ಐಪಿಎಸ್ ಅಧಿಕಾರಿ ಕೆ ಅಣ್ಣಾಮಲೈ ಅವರ ನಂತರ ತಮಿಳುನಾಡು ಬಿಜೆಪಿಯ 13 ನೇ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಳ್ಳಲು ಸಜ್ಜಾಗಿದ್ದಾರೆ. ವರದಿಗಳ ಪ್ರಕಾರ, ಅವರು ಮಾತ್ರ ಈ ಹುದ್ದೆಗೆ ನಾಮಪತ್ರ ಸಲ್ಲಿಸಿದ್ದರಿಂದ ಅವರು ಮಾತ್ರ ಸ್ಪರ್ಧೆಯಲ್ಲಿದ್ದರು.
ಇದು ಬ್ರೇಕಿಂಗ್ ಸುದ್ದಿಯಾಗಿದ್ದು . ಹೆಚ್ಚಿನ ವಿವರಗಳನ್ನು ಶೀಘ್ರದಲ್ಲಿ ಸೇರಿಸಲಾಗುವುದು, ಸ್ವಲ್ಪ ಸಮಯದ ನಂತರ ಮತ್ತೆ ಈ ಪುಟಕ್ಕೆ ಭೇಟಿ ನೀಡಿ.