ಬೆಂಗಳೂರು : ಇತ್ತೀಚಿಗೆ ರಾಜ್ಯ ಸರ್ಕಾರ ಅಗತ್ಯವಸ್ತುಗಳ ಬೆಲೆ ಏರಿಕೆ, ಮುಸ್ಲಿಮರ ಓಲೈಕೆ, ಪರಿಶಿಷ್ಟರಿಗೆ ಮೀಸಲಾಗಿದ್ದ ಅನುದಾನ ಅನ್ಯ ಉದ್ದೇಶಕ್ಕೆ ಬಳಕೆ ಮತ್ತಿತರ ವೈಫಲ್ಯಗಳನ್ನು ಮುಂದಿಟ್ಟುಕೊಂಡು ಬಿಜೆಪಿಯು ಸೋಮವಾರದಿಂದ ರಾಜ್ಯ ಸರ್ಕಾರದ ವಿರುದ್ಧ ಜನಾಕ್ರೋಶ ಯಾತ್ರೆ ಆರಂಭಿಸಲಿದೆ.
ಹೌದು ಈ ಒಂದು ಯಾತ್ರೆಯು ಒಟ್ಟು ನಾಲ್ಕು ಹಂತಗಳಲ್ಲಿ ರಾಜ್ಯದ ಎಲ್ಲ ಜಿಲ್ಲೆಗ ಳಲ್ಲಿ ಯಾತ್ರೆ ನಡೆಯಲಿದೆ. ಮೇ 3ಕ್ಕೆ ಅಂತ್ಯಗೊಳ್ಳಲಿದೆ.ಇಂದು ಮೈಸೂರಿನಲ್ಲಿ ಕೇಂದ್ರ ಆಹಾರ ಮತ್ತು ನಾಗರಿಕ ಪೂರೈಕೆ ಸಚಿವ ಪ್ರಹ್ಲಾದ್ ಜೋಶಿ ಅವರು ಯಾತ್ರೆಗೆ ಚಾಲನೆ ನೀಡಲಿದ್ದಾರೆ. ಪಕ್ಷದ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ, ಮಾಜಿ ಮುಖ್ಯಮಂತ್ರಿ ಡಿ.ವಿ.ಸದಾನಂದಗೌಡ, ಉಭಯ ಸದನಗಳ ಪ್ರತಿಪಕ್ಷಗಳ ನಾಯಕರಾದ ಆರ್.ಅಶೋಕ್, ಛಲವಾದಿ ನಾರಾಯಣ ಸ್ವಾಮಿ ಸೇರಿ ಪಕ್ಷದ ಹಿರಿಯ ನಾಯಕರು, ಕಾರ್ಯಕರ್ತರು ಪಾಲ್ಗೊಳ್ಳಲಿದ್ದಾರೆ.
ಮಧ್ಯಾಹ್ನ 3ಗಂಟೆಗೆ ಚಾಮುಂಡೇಶ್ವರಿ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಲಾಗುತ್ತದೆ. ಬಳಿಕ ಸಂಜೆ 4ಗಂಟೆಗೆ ಕೇಂದ್ರ ಅಂಚೆ ಕಚೇರಿ ವೃತ್ತದಿಂದ ಗಾಂಧಿ ಚೌಕ್‌ವರೆಗೆ ಪಾದಯಾತ್ರೆ ಮೂಲಕ ಜನಾಕ್ರೋಶ ಯಾತ್ರೆ ನಡೆಯಲಿದೆ.ಕಳೆದ ಬುಧವಾರ ಬಿಜೆಪಿ ಇದೇ ವಿಷಯಗಳನ್ನು ಮುಂದಿಟ್ಟುಕೊಂಡು ನಗರದ ಫ್ರೀಡಂ ಪಾರ್ಕ್‌ನಲ್ಲಿ ಅಹೋರಾತ್ರಿ ಧರಣಿ ನಡೆಸಿತ್ತು.ಆ ಮೂಲಕ ಸರಣಿ ಹೋರಾಟಕ್ಕೆ ಚಾಲನೆ ನೀಡಿದ್ದು, ಇದೀಗ ಇಂದಿನಿಂದ 4 ಹಂತಗಳಲ್ಲಿ ಜನಾಕ್ರೋಶ ಯಾತ್ರೆ ಆರಂಭವಗಲಿದೆ.