ದಕ್ಷಿಣಕನ್ನಡ : ಬಿಜೆಪಿ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಮುಂಬೈ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಎನ್ಐಎ ಅಧಿಕಾರಿಗಳು ಮತ್ತೋರ್ವ ಆರೋಪಿಯನ್ನು ಸೆರೆ ಹಿಡಿದಿದ್ದಾರೆ.
ಹೌದು ಆರೋಪಿಯು ಮುಂಬೈ ವಿಮಾನ ನಿಲ್ದಾಣದಿಂದ ವಿದೇಶಕ್ಕೆ ಹಾರಲು ಪ್ರಯತ್ನಿಸುತ್ತಿದ್ದ ಈ ವೇಳೆ ಎನ್ ಆಯಾಧಿಕಾರಿಗಳು ಖಚಿತ ಮಾಹಿತಿಯ ಮೇರೆಗೆ ಆರೋಪಿ ರಿಯಾಜ್ ಯೂಸಫ್ ಹಾರಳ್ಳಿಯನ್ನು ಬಂದಿಸಿದ್ದಾರೆ ಎಂದು ತಿಳಿದುಬಂದಿದೆ.ಈ ಮೂಲಕ ಬಂಧಿತ ಆರೋಪಿಗಳು ಸಂಖ್ಯೆ 19 ಕ್ಕೆ ಏರಿಕೆಯಾಗಿದೆ. ಒಂದು ತಿಂಗಳ ಹಿಂದೆಯಷ್ಟೇ ಸಕಲೇಶಪುರದಲ್ಲಿ ಮುಸ್ತಾಫಾ ಪೈಚಾರ್ನನ್ನು ಬಂಧಿಸಿದ್ದರು.
ಅಲ್ಲದೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಳೆದ ಮೇ.10 ರಂದು ಹಾಸನ ಜಿಲ್ಲೆಯ ಸಕಲೇಶಪುರದ ಆನೆಮಹಲ್ ಬಳಿ ರಾಷ್ಟ್ರೀಯ ತನಿಖಾ ಸಂಸ್ಥೆ ಅಧಿಕಾರಿಗಳು ಬಂಧಿಸಿದ್ದರು. ಸುಳ್ಯದ ಶಾಂತಿನಗರ ನಿವಾಸಿ ಮುಸ್ತಾಫ ಪೈಚಾರ್ (43) ನನ್ನು ಅರೆಸ್ಟ್ ಮಾಡಿ ಅಧಿಕಾರಿಗಳು ಬೆಂಗಳೂರು ಎನ್ಐಎ ಕಚೇರಿಗೆ ಕರೆದೊಯ್ದಿದ್ದರು. ಇದರ ಬೆನ್ನಲ್ಲೇ ಇದೀಗ ಮತ್ತೋರ್ವನನ್ನು ಬಂಧಿಸಲಾಗಿದೆ.