ಬೆಂಗಳೂರು : ಧಾರವಾಡದ ಬಿಜೆಪಿ ಮುಖಂಡ ಯೋಗೀಶ್ ಗೌಡ ಕೊಲೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಬೆಂಗಳೂರಿನ ಜನಪ್ರತಿನಿಧಿಗಳ ನ್ಯಾಯಾಲಯದ ಜಡ್ಜ್ ಸಂತೋಷ್ ಗಜಾನನ ಭಟ್ ಅವರು ಇಂದು 3 ಗಂಟೆಗೆ ತೀರ್ಪು ಪ್ರಕಟಿಸಲಾಗುತ್ತೆ ಎಂದು ತಿಳಿಸಿದ್ದಾರೆ. 3 ಗಂಟೆ ಒಳಗೆ ತೀರ್ಪು ಪ್ರಕಟಿಸುವ ಸಾಧ್ಯತೆ ಇದೆ ಎಂದು ತಿಳಿದುಬಂದಿದೆ.
ಇಂದು ಬೆಳಿಗ್ಗೆ 10 ಗಂಟೆಗೆನೇ ಕೋರ್ಟು ತೀರ್ಪು ಪ್ರಕಟಿಸಬೇಕಾಗಿತ್ತು . ಆದರೆ ಮೊದಲಿಗೆ ವಿನಯ್ ಕುಲಕರಣಿ ಅಪರಾಧಿಯೋ ಅಥವಾ ನಿರಪರಾಧಿಯೋ ಎಂದು ಕೋರ್ಟ್ ನಿರ್ಧರಿಸಲಿದೆ ಅಪರಾಧಿ ಅಂತ ಎಂದಾದರೆ ಶಿಕ್ಷ ಪ್ರಮಾಣದ ಬಗ್ಗೆ ವಿಚಾರಣೆ ನಡೆಸಲಿದೆ ವಿಚಾರಣೆಯ ಬಳಿಕ ಶಿಕ್ಷೆ ಪ್ರಮಾಣ ಕೋರ್ಟ್ ಪ್ರಕಟಿಸಲಿದೆ.
ಪ್ರಕರಣ ಹಿನ್ನೆಲೆ
ಧಾರವಾಡದಲ್ಲಿ 2016 ಜೂನ್‌ನಲ್ಲಿ ಯೋಗಿಶ್ ಗೌಡ ಕೊಲೆಯಾಗಿತ್ತು. ಶಾಸಕ ವಿನಯ್ ಕುಲಕರ್ಣಿ ಮೇಲೆ ಕೊಲೆಗೆ ಒಳಸಂಚು ಆರೋಪ ಕೇಳಿಬಂದಿತ್ತು. ತನಿಖೆ ನಡೆಸಿದ ಪೊಲೀಸರ ಮುಂದೆ ಆರು ಜನ ಆರೋಪಿಗಳು ಶರಣಾಗಿದ್ದರು. ಯೋಗಿಶ್ ಗೌಡ ಕುಟುಂಬಸ್ಥರ ಮನವಿ ಮೇರೆಗೆ ಸಿಬಿಐಗೆ ನೀಡಲಾಗಿತ್ತು. 2019ರಲ್ಲಿ ಸಿಬಿಐ ಗೆ ನೀಡಿ ರಾಜ್ಯ ಸರ್ಕಾರ ಆದೇಶ ನೀಡಿತ್ತು. ತನಿಖೆ ನಡಸಿದ್ದ ಸಿಬಿಐ ಅಧಿಕಾರಿಗಳು ಶಾಸಕ ವಿನಯ್ ಕುಲಕರ್ಣಿಯನ್ನು ಬಂಧಿಸಿದ್ದರು.
ಕೊಲೆಯಾದ ಯೋಗೇಶ್ ಗೌಡ ಕುಟುಂಬದ ಸದಸ್ಯರ ಒತ್ತಾಯದ ಮೇರೆಗೆ 2019ರಲ್ಲಿ ಈ ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸಲಾಗಿತ್ತು. ಸಿಬಿಐ ತನಿಖೆಯಲ್ಲಿ ಇದು ರಾಜಕೀಯ ಪ್ರೇರಿತ ಕೊಲೆ ಎಂಬುದು ತಿಳಿದು ಬಂದಿತ್ತು. ಈ ಕೊಲೆಯಲ್ಲಿ ಮಾಜಿ ಸಚಿವ ವಿನಯ್ ಕುಲಕರ್ಣಿ ಕೈವಾಡವಿರುವ ಶಂಕೆ ಹಿನ್ನೆಲೆಯಲ್ಲಿ 2020ರ ನ.5ರಂದು ಸಿಬಿಐ ಅಧಿಕಾರಿಗಳು ವಿನಯ್ ಕುಲಕರ್ಣಿ ಅವರನ್ನು ಬಂಧಿಸಿದ್ದರು. ಈ ಪ್ರಕರಣದಲ್ಲಿ ವಿನಯ್ ಸೇರಿ ಒಟ್ಟು 21 ಮಂದಿ ಆರೋಪಿಗಳ ವಿರುದ್ಧ ನ್ಯಾಯಾಲಯಕ್ಕೆ ದೋಷಾರೋಪಟ್ಟಿ ಸಲ್ಲಿಸಿದ್ದರು. ಇತ್ತೀಚೆಗಷ್ಟೇ ವಿನಯ್ ಕುಲಕರ್ಣಿ ಸುಪ್ರೀಂ ಕೋರ್ಟ್‌ನಿಂದ ಜಾಮೀನು ಪಡೆದು ಬಿಡುಗಡೆಯಾಗಿದ್ದರು.








