ಬೆಳಗಾವಿ : ಬೆಳಗಾವಿಯಲ್ಲಿ ರೈತರ ಪರ ಬಿಜೆಪಿ ನಾಯಕರು ಹೋರಾಟಕ್ಕೆ ಇಳಿದಿದ್ದು ಬೆಳಗಾವಿಯ ಸುವರ್ಣ ಸೌಧ ಮುತ್ತಿಗೆ ಹಾಕಲು ಬಿಜೆಪಿ ನಾಯಕರು ಇದೀಗ ಹೊರಟಿದ್ದಾರೆ ಸರ್ಕಾರದ ವಿರುದ್ಧ ಘೋಷಣೆ ಕೂಗುತ್ತಾ ಪ್ರತಿಭಟನಾ ಪಾದಯಾತ್ರೆಯಲ್ಲಿ ರೈತರ ಪರವಾಗಿ ಹೋರಾಟ ನಡೆಸುತ್ತಿದ್ದಾರೆ. ಸುವರ್ಣಸೌಧ ಮುತ್ತಿಗೆ ಹಾಕಲು ಯತ್ನಿಸುವಾಗ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಸಿಟಿ ರವಿ ಸೇರಿದಂತೆ ಹಲವರನ್ನು ಪೊಲೀಸರು ವಶಕ್ಕೆ ಪಡೆದುಕೊಂಡರು.
ಬೆಳಗಾವಿಯ ಮಾಲಿನಿ ಸಿಟಿ ಮೈದನಾದಲ್ಲಿ ರೈತರೊಂದಿಗೆ ಬಿಜೆಪಿ ನಾಯಕರು ಪ್ರತಿಭಟನಾ ಸಭೆ ನಡೆಸಿದ್ದು, ಸಭೆ ಬಳಿಕ ಮಾಲಿನಿಸಿಟಿ ಮೈದಾನದಿಂದ ಪಾದಯಾತ್ರೆ ಮೂಲಕವಾಗಿ ಸುವರ್ಣಸೌಧದತ್ತ ಪಾದಯಾತ್ರೆ ಕೈಗೊಂಡಿದ್ದರು. ಈ ವೇಳೆ ಅಲಗಾ ಗ್ರಾಮದ ರಾಷ್ಟ್ರೀಯ ಹೆದ್ದಾರಿಯಲ್ಲೇ ಬಿಜೆಪಿ ನಾಯಕರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.
ಈ ಒಂದು ಹೋರಾಟದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಪರಿಷತ್ ಸದಸ್ಯ ಸಿಟಿ ರವಿ ಸಿರಿದಂತೆ ಎಲ್ಲಾ ಬಿಜೆಪಿ ನಾಯಕರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು. ಮಾಲಿನಿ ಸಿಟಿಯಿಂದ ಸುವರ್ಣಸೌಧದ ಕಡೆಗೆ ಪ್ರತಿಭಟನೆ ರ್ಯಾಲಿ ತೆರಳಿತು ಸುವರ್ಣ ಸೌಧ ಮುತ್ತಿಗೆ ಹಾಕಲು ಬಿಜೆಪಿ ನಾಯಕರು ರೈತರು ಪಾದಯಾತ್ರೆಯಲ್ಲಿ ಭಾಗವಹಿಸಿದ್ದಾರೆ. ಸರ್ಕಾರದ ವಿರುದ್ಧ ಘೋಷಣೆ ಕೂಗುತ್ತಾ ಪ್ರತಿಭಟನಾ ಪಾದಯಾತ್ರೆ ನಡೆಸಿದರು. ಈ ವೇಳೆ ಅಪಾರ ಸಂಖ್ಯೆಯಲ್ಲಿ ರೈತರು ಭಾಗವಹಿಸಿದ್ದರು.








