ಬೆಂಗಳೂರು : ನಿನ್ನೆ ಅಟ್ರಾಸಿಟಿ ಪ್ರಕರಣದಲ್ಲಿ ಜಾಮೀನು ಪಡೆದಿದ್ದ ಬಿಜೆಪಿ ಶಾಸಕ ಮುನಿರತ್ನ ಅವರನ್ನು ಇಂದು ರಾಮನಗರ ಜಿಲ್ಲೆಯ ಕಗ್ಗಲಿಪುರ ಠಾಣೆಯ ಪೊಲೀಸರು ಅತ್ಯಾಚಾರ ಪ್ರಕರಣಕ್ಕೆ ಸಂಬಂಧಪಟ್ಟಂತೆ ಮತ್ತೆ ಬಂಧಿಸಿದ್ದಾರೆ. ಇದರ ಬೆನ್ನಲ್ಲೇ ಮುನಿರತ್ನ ವಿರುದ್ಧ ಮತ್ತೊಬ್ಬ ಮಹಿಳೆಯೊಬ್ಬರು ಅತ್ಯಾಚಾರದ ಆರೋಪ ಮಾಡಿದ್ದಾರೆ ಎಂದು ತಿಳಿದುಬಂದಿದೆ.
ಹೌದು ಅತ್ಯಾಚಾರ ಪ್ರಕರಣಕ್ಕೆ ಸಂಬಂಧ ಪಟ್ಟಂತೆ, ಕೃತ್ಯ ನಡೆದ ರಾಮನಗರ ಜಿಲ್ಲಾ ವ್ಯಾಪ್ತಿಯ ಕಗ್ಗಲೀಪುರ ಪೊಲೀಸ್ ಠಾಣೆಯಲ್ಲಿ ಸಂತ್ರಸ್ತೆ ಬುಧವಾರ ತಡರಾತ್ರಿ ಅತ್ಯಾಚಾರದ ದೂರು ದಾಖಲಿಸಿದ್ದಾರೆ. ಖಾಸಗಿ ರೆಸಾರ್ಟ್‌ನಲ್ಲಿ ಅತ್ಯಾಚಾರ ನಡೆದಿರುವುದಾಗಿ ಸಂತ್ರಸ್ತೆ ಡಿವೈಎಸ್‌ಪಿ ದಿನಕರ್ ಶೆಟ್ಟಿ ಸಮ್ಮುಖದಲ್ಲಿ ಸಂತ್ರಸ್ತೆ ಹೇಳಿಕೆ ನೀಡಿದ್ದಾರೆ.
ಸಂತ್ರಸ್ತೆ ಮಹಿಳೆಯ ದೂರಿನಲ್ಲಿ ಏನಿದೆ?
ಕೋವಿಡ್ ಸಂದರ್ಭದಲ್ಲಿ ಇಬ್ಬರ ನಡುವೆ ಆತ್ಮೀಯತೆ ಬೆಳೆದಿತ್ತು. ಆಗ್ಗಾಗೆ ವಿಡಿಯೋ ಕಾಲ್ ಮಾಡಿ ಮಾತನಾಡುತ್ತಿದ್ದರು. ನಗ್ನವಾಗಿ ಇರುವಂತೆ ಕರೆ ಮಾಡಿ ಒತ್ತಾಯಿಸಿದಾಗ ಅದನ್ನು ನಿರಾಕರಿಸಿದ್ದೆ. ಒಮ್ಮೆ ಸ್ಥಳವೊಂದಕ್ಕೆ ಬರಲು ಹೇಳಿದ್ದರು. ನಾನು ಅಲ್ಲಿಗೆ ಹೋದಾಗ ತಬ್ಬಿಕೊಳ್ಳಲು ಮುಂದಾಗಿದ್ದರು.
ಅದಕ್ಕೆ ಆಕ್ಷೇಪಿಸಿದಾಗ ರಾಜಕೀಯಕ್ಕೆ ಬರಬೇಕಾದರೆ ಇವೆಲ್ಲಾ ಕಾಮನ್ ಎಂದು ಹೇಳಿದ್ದರು. ಬಳಿಕ ಅತ್ಯಾಚಾರವೆಸಗಿದ್ದು, ಈ ವಿಷಯವನ್ನು ಯಾರಿಗಾದರೂ ಹೇಳಿದರೆ ಸಿಸಿಟಿವಿ ಕ್ಯಾಮರಾದಲ್ಲಿ ರೆಕಾರ್ಡ್ ಆಗಿರುವ ವಿಡಿಯೋವನ್ನು ಎಡಿಟ್ ಮಾಡಿ ಹಂಚುತ್ತೇನೆ ಎಂದು ಹೆದರಿಸಿದ್ದರು. ವಿಡಿಯೋ ಇಟ್ಟುಕೊಂಡು ಹಲವು ಬಾರಿ ಮುನಿರತ್ನ ಅತ್ಯಾಚಾರವೆಸಗಿರುವುದಾಗಿ ಮಹಿಳೆ ದೂರಿನಲ್ಲಿ ಆರೋಪಿಸಿದ್ದಾರೆ.