ಬೆಂಗಳೂರು : ಮಹಿಳೆ ಮೇಲೆ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ರಾಜರಾಜೇಶ್ವರಿ ನಗರ ಬಿಜೆಪಿ ಶಾಸಕ ಮುನಿರತ್ನಗೆ ಜೈಲಾಧಿಕಾರಿಗಳು ಕೈದಿ ನಂಬರ್ ನೀಡಿದ್ದಾರೆ.
ಹೌದು ಮುನಿರತ್ನಗೆ ಜೈಲಾಧಿಕಾರಿಗಳು ವಿಚಾರಣಾಧೀನ ಕೈದಿ ನಂಬರ್-9273 ನೀಡಿದ್ದಾರೆ. ಮುನಿರತ್ನ ನನ್ನ ಮೇಲೆ ಅತ್ಯಾಚಾರ ಎಸೆಗಿದ್ದಾನೆ ಎಂದು ಇತ್ತೀಚೆಗೆ ಮಹಿಳೆ ಒಬ್ಬರು ರಾಮನಗರ ಜಿಲ್ಲೆಯ ಕಗ್ಗಲಿಪುರ ಪೊಲೀಸ್ ಠಾಣೆಗೆ ಆಗಮಿಸಿ ದೂರು ನೀಡಿದ್ದರು. ಈ ಒಂದು ದೂರಿನ ಹಿನ್ನೆಲೆಯಲ್ಲಿ, ಅವರನ್ನು ಬಂಧಿಸಲಾಗಿದೆ.
ಇದಕ್ಕೂ ಮೊದಲು ಅಟ್ರಾಸಿಟಿ ಪ್ರಕರಣದಲ್ಲಿ ಮುನಿರತ್ನ ಅವರು ಪರಪ್ಪನ ಅಗ್ರಹಾರ ಜೈಲಿನಿಂದ ಬಿಡುಗಡೆಯಾಗಿದ್ದರು. ಈ ವೇಳೆ ಬಿಡುಗಡೆಯಾದ ತಕ್ಷಣ ಮತ್ತೆ ರಾಮನಗರ ಪೊಲೀಸರು ಮುನಿರತ್ನ ಅವರನ್ನು ಬಂಧಿಸಿದ್ದಾರೆ. ಬಳಿಕ ರಾಜ್ಯ ಸರ್ಕಾರ ಮುನಿರತ್ನ ಪ್ರಕರಣವನ್ನು ಎಸ್ ಐ ಟಿ ಇ ತನಿಖೆಗೆ ವಹಿಸಿ ಆದೇಶ ಹೊರಡಿಸಿತ್ತು.ಇದೀಗ ಇಂದು ಅವರು ಸಲ್ಲಿಸಿದ್ದ ಜಾಮೀನು ಅರ್ಜಿ ವಿಚಾರಣೆ ನಡೆಸಿದ ಕೋರ್ಟ್ ವಿಚಾರಣೆ 25ಕ್ಕೆ ಮುಂದೂಡಿದೆ.