ಕಾರ್ಕಳ : ಬಿಜೆಪಿ ಶಾಸಕ ಸುನಿಲ್ ಕುಮಾರ್‌ಗೆ ಪಿತೃ ವಿಯೋಗವಾಗಿದೆ. ಅವರ ತಂದೆ ಕೆ.ಎಂ. ವಾಸುದೇವ (87) ಅವರು ಮುಂಜಾನೆ ಮಣಿಪಾಲದ ಕೆಎಂಸಿ ಆಸ್ಪತ್ರೆಯಲ್ಲಿ ನಿಧನ ಹೊಂದಿದ್ದಾರೆ.
ವಯೋ ಸಹಜ ಕಾಯಿಲೆಯಿಂದ ಬಳಲುತ್ತಿದ್ದ ಅವರು ಇತ್ತೀಚೆಗಷ್ಟೇ ಮಣಿಪಾಲ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದರು. ತೀವ್ರ ನಿಗಘಟಕದಲ್ಲಿ ಅವರಿಗೆ ಚಿಕಿತ್ಸೆ ನೀಡಲಾಗುತ್ತಿತ್ತು. ಆದ್ರೆ ಚಿಕಿತ್ಸೆ ಫಲಕಾರಿಯಾಗದೆ ನಿಧನರಾಗಿದ್ದಾರೆ.
ಮೃತರು ಪತ್ನಿ, ಪುತ್ರ ಹಾಗೂ ಪುತ್ರಿಯನ್ನು ಅಗಲಿದ್ದಾರೆ. ವೃತ್ತಿಯಲ್ಲಿ ಶಿಕ್ಷಕರಾಗಿದ್ದ ಅವರು, ರಾಷ್ಟ್ರೀಯ ಸ್ವಯಂ ಸೇವಕ ಸಂಘದಲ್ಲಿ ವಿವಿಧ ಹುದ್ದೆಗಳನ್ನು ನಿರ್ವಹಿಸಿದ್ದರು. ಇಂದು ಸಂಜೆ ಕಲಂಬಾಡಿ ಪದವಿನಲ್ಲಿರುವ ಶಾಸಕರ ಸ್ವಗೃಹದಲ್ಲಿ ಅಂತಿಮ ವಿಧಿವಿಧಾನ ನಡೆಯಲಿದೆ ಎಂದು ಕುಟುಂಬದ ಮೂಲಗಳ ತಿಳಿಸಿದೆ.