ಬೆಂಗಳೂರು : ರಾಜ್ಯ ರಾಜಕಾರಣದಲ್ಲಿ ದಿನವೊಂದಕ್ಕೆ ಹಲವು ಬದಲಾವಣೆ ಆಗುತ್ತಿದ್ದು, ನಿನ್ನೆ ತಾನೇ ಬಿವೈ ವಿಜಯೇಂದ್ರ ಬಳ್ಳಾರಿಯಲ್ಲಿ ಪಕ್ಷ ಸಂಘಟನಾ ಕಾರ್ಯಕ್ರಮ ನಡೆಸಿದ್ದು ಇದರಲ್ಲಿ ಶ್ರೀರಾಮುಲು ಹಾಗೂ ಶಾಸಕ ಜನಾರ್ಧನ ರೆಡ್ಡಿ ಅವರ ಕೈಹಿಡಿದು ಎತ್ತಿ ಒಗ್ಗಟ್ಟು ಪ್ರದರ್ಶಿಸಿದರು. ಇದೀಗ ಸಚಿವ ಪ್ರಿಯಾಂಕ ಖರ್ಗೆ ಬಿಜೆಪಿಯ ನಾಯಕರು ನನಗೆ ಅಮಿಷ ಒಡ್ಡಿದ್ದಾರೆ ಎಂದು ಹೊಸ ಬಾಂಬ್ ಸಿಡಿಸಿದ್ದಾರೆ.
ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಸಿದ್ದರಾಮಯ್ಯ ಸರ್ಕಾರ ಅನುದಾನ ವಿಚಾರದಲ್ಲಿ ತಾರತಮ್ಯ ಮಾಡುತ್ತಿದೆ ಎಂದು ಪ್ರತಿಪಕ್ಷ ಬಿಜೆಪಿ ಮಾಡಿರುವ ಆರೋಪಕ್ಕೆ ತಿರುಗೇಟು ನೀಡಿದ ಅವರು, ಬಿಜೆಪಿ ಸರ್ಕಾರದ ಅವಧಿಯಲ್ಲಿ ತಮ್ಮ ಕ್ಷೇತ್ರಕ್ಕೆ ಮಂಜೂರಾದ 280 ಕೋಟಿ ರೂಪಾಯಿಗಳ ಯೋಜನೆಗಳನ್ನು ಸ್ಥಗಿತಗೊಳಿಸಲಾಗಿತ್ತು. ಅಷ್ಟೇ ಅಲ್ಲದೆ, ಬಿಜೆಪಿ ಶಾಸಕರು ತಮಗೆ ಆಮಿಷವೊಡ್ಡಿದ್ದರು ಎಂದಿದ್ದಾರೆ.