ನವದೆಹಲಿ : ತಮಿಳುನಾಡು ಬಿಜೆಪಿಯ ಮಾಜಿ ರಾಜ್ಯಾಧ್ಯಕ್ಷ ಕೆ. ಅಣ್ಣಾಮಲೈ ಅವರು ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ಸಲ್ಲಿಸಿದ್ದ ರಾಜೀನಾಮೆಯನ್ನು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ನಿತಿನ್ ನವೀನ್ ಅವರು ಅಂಗೀಕರಿಸಿದ್ದಾರೆ.
ಕೆಲ ದಿನಗಳ ಹಿಂದಷ್ಟೇ ತಮಿಳುನಾಡು ಬಿಜೆಪಿ ರಾಜ್ಯಾಧ್ಯಕ್ಷ ಹುದ್ದೆಯಿಂದ ಕೆಳಗಿಳಿದಿದ್ದ ಅಣ್ಣಾಮಲೈ, ಇದೀಗ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೂ ರಾಜೀನಾಮೆ ನೀಡುವ ಮೂಲಕ ಬಿಜೆಪಿಯೊಂದಿಗೆ ಇದ್ದ ಎಲ್ಲಾ ಸಂಬಂಧಗಳನ್ನು ಅಧಿಕೃತವಾಗಿ ಕಡಿತಗೊಳಿಸಿಕೊಂಡಿದ್ದಾರೆ. ಅವರ ಈ ಹಠಾತ್ ನಿರ್ಧಾರವನ್ನು ಪಕ್ಷದ ಹೈಕಮಾಂಡ್ ತಕ್ಷಣವೇ ಅಂಗೀಕರಿಸಿದೆ.
ಮಾಜಿ ಐಪಿಎಸ್ ಅಧಿಕಾರಿಯಾಗಿದ್ದ ಅಣ್ಣಾಮಲೈ ಅವರು ತಮಿಳುನಾಡಿನಲ್ಲಿ ಬಿಜೆಪಿಯನ್ನು ತಳಮಟ್ಟದಿಂದ ಬಲಪಡಿಸಲು ಶ್ರಮಿಸಿದ್ದರು. ಆದರೆ, ಇತ್ತೀಚಿನ ರಾಜಕೀಯ ಬೆಳವಣಿಗೆಗಳ ಹಿನ್ನೆಲೆಯಲ್ಲಿ ಅವರು ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೂ ರಾಜೀನಾಮೆ ನೀಡಿ ಹೊರನಡೆದಿರುವುದು ತಮಿಳುನಾಡು ಹಾಗೂ ರಾಷ್ಟ್ರ ರಾಜಕಾರಣದಲ್ಲಿ ತೀವ್ರ ಕುತೂಹಲ ಮೂಡಿಸಿದೆ.
BJP National President Nitin Nabin has accepted the resignation submitted by the Tamil Nadu Ex-State President K Annamalai from the primary membership of the Party. pic.twitter.com/gYvMKYeVJH
— ANI (@ANI) June 5, 2026
BJP National President Nitin Nabin has accepted the resignation submitted by the Tamil Nadu Ex-State President K Annamalai from the primary membership of the Party. pic.twitter.com/qaQ9gWPL6g
— ANI (@ANI) June 5, 2026








