ಚಿಕ್ಕಬಳ್ಳಾಪುರ : ಈ ಹಿಂದೆ ಬಿಜೆಪಿಯು ನನಗೆ ಸಚಿವ ಸ್ಥಾನದ ಆಫರ್ ನೀಡಿತು ಆದರೆ ನಾನು ಕಾಂಗ್ರೆಸ್ ಪಕ್ಷದಲ್ಲಿ ನಿಷ್ಠೆಯಿಂದ ದುಡಿದಿದ್ದೇನೆ ಹಾಗಾಗಿ ನನಗೆ ಸಂಪುಟ ಪುಣ ರಚನೆಯ ಸಂದರ್ಭದಲ್ಲಿ ಸಚಿವ ಸ್ಥಾನ ಬೇಕು ಎಂದು ಚಿಕ್ಕಬಳ್ಳಾಪುರ ಜಿಲ್ಲೆಯ ಬಾಗೇಪಲ್ಲಿಯಲ್ಲಿ ಕಾಂಗ್ರೆಸ್ ಶಾಸಕ ಎಸ್ಎನ್ ಸುಬ್ಬಾರೆಡ್ಡಿ ಹೊಸ ಬಾಂಬ್ ಸಿಡಿಸಿದ್ದಾರೆ.
ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಸಚಿವ ಸ್ಥಾನ ಕೇಳಲು ನನಗೆ ಹಕ್ಕಿದೆ. ನನಗೂ ಸಚಿವ ಸ್ಥಾನ ಬೇಕು ಎಂದು ಚಿಕ್ಕಬಳ್ಳಾಪುರ ಜಿಲ್ಲೆಯ ಬಾಗೇಪಲ್ಲಿ ಶಾಸಕ ಸುಬ್ಬರಡ್ಡಿ ಹೇಳಿಕೆ ನೀಡಿದ್ದು, ಈ ಹಿಂದೆ ಬಿಜೆಪಿಯವರು ನನಗೆ ಸಚಿವ ಸ್ಥಾನದ ಆಫರ್ ಕೊಟ್ಟಿದ್ದರು. ಆದರೆ ನಾನು ಕಾಂಗ್ರೆಸ್ ಪಕ್ಷಕ್ಕೆ ನಿಷ್ಠೆಯಿಂದ ಇದ್ದೆ ಎಂದು ಅವರು ಸ್ಫೋಟಕವಾದ ಹೇಳಿಕೆ ನೀಡಿದ್ದಾರೆ.
ಸಂಪುಟ ಪುಣೆ ನನಗೆ ಸಚಿವ ಸ್ಥಾನ ಕೊಡಲೇಬೇಕು ಸಿಎಂ ಹಾಗೂ ಡಿಸಿಎಂ ನನಗೆ ಸಚಿವ ಸ್ಥಾನ ನೀಡುವ ಭರವಸೆ ಇದೆ. ನಾನು ಎರಡು ಬಾರಿ ನಿಗಮ ಮಂಡಳಿ ಸ್ಥಾನ ತಿರಸ್ಕಾರ ಮಾಡಿದ್ದೇನೆ. ಚಿಕ್ಕಬಳ್ಳಾಪುರ, ಶಿಡ್ಲಘಟ್ಟ, ಗೌರಿಬಿದನೂರು ವಿಧಾನಸಭಾ ಕ್ಷೇತ್ರ, ಚಿಂತಾಮಣಿ ಕ್ಷೇತ್ರದ ಶಾಸಕರು ಸಚಿವರಾಗಿದ್ದಾರೆ. ಬಾಗೇಪಲ್ಲಿ ಕ್ಷೇತ್ರದಿಂದ ಇದುವರೆಗೂ ಯಾರು ಕೂಡ ಸಚಿವರಾಗಿಲ್ಲ. ಹಾಗಾಗಿ ನನಗೆ ಸಚಿವ ಸ್ಥಾನ ಕೊಡಬೇಕು ಎಂದು ಶಾಸಕ ಎಸ್ಎನ್ ಸುಬ್ಬಾರೆಡ್ಡಿ ಆಗ್ರಹಿಸಿದ್ದಾರೆ.