Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING : ಕರ್ನಾಟಕ ಉಪಚುನಾವಣೆ : ಬಾಗಲಕೋಟೆಯಲ್ಲಿ ಉಮೇಶ್ ಮೇಟಿಗೆ ಭರ್ಜರಿ ಗೆಲುವು!

04/05/2026 12:11 PM

BREAKING : ಬಾಗಲಕೋಟೆ ವಿಧಾನಸಭೆ ಉಪಚುನಾವಣೆ ಫಲಿತಾಂಶ : ಕಾಂಗ್ರೆಸ್ ಅಭ್ಯರ್ಥಿ ಉಮೇಶ್ ಮೇಟಿ ಭರ್ಜರಿ ಗೆಲುವು

04/05/2026 12:06 PM

BREAKING : ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಯಲ್ಲಿ ಬಹುಮತದತ್ತ ಬಿಜೆಪಿ : ಸಿಹಿ ಹಂಚಿ ಅಭಿಮಾನಿಗಳ ಸಂಭ್ರಮ | WATCH VIDEO

04/05/2026 11:47 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BREAKING : ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಯಲ್ಲಿ ಬಹುಮತದತ್ತ ಬಿಜೆಪಿ : ಸಿಹಿ ಹಂಚಿ ಅಭಿಮಾನಿಗಳ ಸಂಭ್ರಮ | WATCH VIDEO
INDIA

BREAKING : ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಯಲ್ಲಿ ಬಹುಮತದತ್ತ ಬಿಜೆಪಿ : ಸಿಹಿ ಹಂಚಿ ಅಭಿಮಾನಿಗಳ ಸಂಭ್ರಮ | WATCH VIDEO

By kannadanewsnow5704/05/2026 11:47 AM

ಕೋಲ್ಕತ್ತಾ: ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯ ಮತ ಎಣಿಕೆ ಪ್ರಕ್ರಿಯೆ ಬಿರುಸಿನಿಂದ ಸಾಗುತ್ತಿದ್ದು, ರಾಜ್ಯದಲ್ಲಿ ಬಿಜೆಪಿ ಬಹುಮತದ ಗಡಿಯನ್ನು ದಾಟುತ್ತಿದ್ದಂತೆ ಕಾರ್ಯಕರ್ತರ ಸಂಭ್ರಮ ಮುಗಿಲು ಮುಟ್ಟಿದೆ.

ರಾಜ್ಯಾದ್ಯಂತ ಬಿಜೆಪಿ ಮುನ್ನಡೆ ಸಾಧಿಸುತ್ತಿರುವ ಹಿನ್ನೆಲೆಯಲ್ಲಿ, ಕೋಲ್ಕತ್ತಾದ ಭವಾನಿಪುರ ವಿಧಾನಸಭಾ ಕ್ಷೇತ್ರದ ಮತ ಎಣಿಕೆ ಕೇಂದ್ರದ ಮುಂಭಾಗದಲ್ಲಿ ಬಿಜೆಪಿ ಕಾರ್ಯಕರ್ತರು ಪರಸ್ಪರ ಸಿಹಿ ಹಂಚಿ ಸಂಭ್ರಮಿಸುತ್ತಿದ್ದಾರೆ.

ದೇಶದಲ್ಲಿ ಕುತೂಹಲ ಕೆರಳಿಸಿದ್ದ ಪಂಚರಾಜ್ಯ ಚುನಾವಣೆಯ ಮತ ಎಣಿಕೆ ಕಾರ್ಯ ಭರದಿಂದ ಸಾಗಿದ್ದು, ಪ್ರಾಥಮಿಕ ವರದಿಗಳ ಪ್ರಕಾರ ಪಶ್ಚಿಮ ಬಂಗಾಳದಲ್ಲಿ ಆಡಳಿತಾರೂಢ ತೃಣಮೂಲ ಕಾಂಗ್ರೆಸ್‌ಗೆ (ಟಿಎಂಸಿ) ಭಾರಿ ಹಿನ್ನಡೆಯಾಗಿದೆ. ತೀವ್ರ ಪೈಪೋಟಿಯ ನಡುವೆಯೂ ಭಾರತೀಯ ಜನತಾ ಪಕ್ಷವು (ಬಿಜೆಪಿ) ಮ್ಯಾಜಿಕ್ ನಂಬರ್ ದಾಟುವ ಮೂಲಕ ಬಂಗಾಳದ ನೆಲದಲ್ಲಿ ಹೊಸ ಇತಿಹಾಸ ಬರೆಯುವ ಮುನ್ಸೂಚನೆ ನೀಡಿದೆ.

ಮ್ಯಾಜಿಕ್ ನಂಬರ್ ದಾಟಿದ ಬಿಜೆಪಿ ಬಂಗಾಳದ ಒಟ್ಟು ವಿಧಾನಸಭಾ ಕ್ಷೇತ್ರಗಳ ಪೈಕಿ ಬಿಜೆಪಿ ಸದ್ಯ 177 ಕ್ಷೇತ್ರಗಳಲ್ಲಿ ಭರ್ಜರಿ ಮುನ್ನಡೆ ಕಾಯ್ದುಕೊಳ್ಳುವ ಮೂಲಕ ಬಹುಮತದ ಗಡಿಯನ್ನು ದಾಟಿದೆ. ಪ್ರಧಾನಿ ಮೋದಿ ಮತ್ತು ಅಮಿತ್ ಶಾ ಅವರ ತಂತ್ರಗಾರಿಕೆ ಬಂಗಾಳದಲ್ಲಿ ಫಲ ನೀಡಿದಂತಿದ್ದು, ಮತದಾರರು ಬದಲಾವಣೆಯತ್ತ ಮೊರೆ ಹೋಗಿದ್ದಾರೆ ಎಂಬುದು ಮುನ್ನಡೆಯ ಅಂಕಿಅಂಶಗಳಿಂದ ಸ್ಪಷ್ಟವಾಗುತ್ತಿದೆ. ಕಾರ್ಯಕರ್ತರು ಈಗಾಗಲೇ ರಾಜ್ಯದಾದ್ಯಂತ ಸಂಭ್ರಮಾಚರಣೆಯಲ್ಲಿ ತೊಡಗಿದ್ದಾರೆ.

ಟಿಎಂಸಿಗೆ ಆಘಾತ, ಮಮತಾಗೆ ಹಿನ್ನಡೆ ಕಳೆದ ಒಂದು ದಶಕದಿಂದ ಬಂಗಾಳವನ್ನು ಆಳುತ್ತಿದ್ದ ಮಮತಾ ಬ್ಯಾನರ್ಜಿ ನೇತೃತ್ವದ ಟಿಎಂಸಿ ಪಕ್ಷವು ಸದ್ಯ 109 ಕ್ಷೇತ್ರಗಳಲ್ಲಿ ಮಾತ್ರ ಮುನ್ನಡೆ ಸಾಧಿಸಿದ್ದು, ಎರಡನೇ ಸ್ಥಾನಕ್ಕೆ ತಳ್ಳಲ್ಪಟ್ಟಿದೆ. ಎಲ್ಲಕ್ಕಿಂತ ಮುಖ್ಯವಾಗಿ, ಸ್ವತಃ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರಿಗೆ ತಮ್ಮ ಭದ್ರಕೋಟೆಯಾದ ಭವಾನಿಪುರ ಕ್ಷೇತ್ರದಲ್ಲಿ ಆರಂಭಿಕ ಹಿನ್ನಡೆಯಾಗಿರುವುದು ಪಕ್ಷಕ್ಕೆ ಮತ್ತು ಬೆಂಬಲಿಗರಿಗೆ ದೊಡ್ಡ ಆಘಾತ ತಂದಿದೆ. ಮಮತಾ ಅವರ ಪ್ರತಿಷ್ಠೆಯ ಕಣದಲ್ಲಿ ಮತದಾರರು ಅನಿರೀಕ್ಷಿತ ತೀರ್ಪು ನೀಡುವ ಸಾಧ್ಯತೆ ದಟ್ಟವಾಗಿದೆ.

ಭವಾನಿಪುರದಲ್ಲಿ ಫೈಟ್:

ಹೈವೋಲ್ಟೇಜ್ ಕ್ಷೇತ್ರವಾಗಿರುವ ಭವಾನಿಪುರದಲ್ಲಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮತ್ತು ಬಿಜೆಪಿಯ ಸುವೇಂದು ಅಧಿಕಾರಿ ನಡುವೆ ತೀವ್ರ ಪೈಪೋಟಿ ಏರ್ಪಟ್ಟಿದೆ.

ಸದ್ಯದ ಮಾಹಿತಿ: ಒಟ್ಟು 20 ಸುತ್ತುಗಳ ಮತ ಎಣಿಕೆಯಲ್ಲಿ 3 ಸುತ್ತುಗಳು ಪೂರ್ಣಗೊಂಡಿವೆ.

ಮುನ್ನಡೆ: ಮಮತಾ ಬ್ಯಾನರ್ಜಿ ಅವರು ತಮ್ಮ ಪ್ರತಿಸ್ಪರ್ಧಿ ಸುವೇಂದು ಅಧಿಕಾರಿ ಅವರಿಗಿಂತ 898 ಮತಗಳ ಅಲ್ಪ ಅಂತರದ ಮುನ್ನಡೆಯನ್ನು ಕಾಯ್ದುಕೊಂಡಿದ್ದಾರೆ.

ಸದ್ಯದ ಟ್ರೆಂಡ್ ಗಮನಿಸಿದರೆ ರಾಜ್ಯದಲ್ಲಿ ಈ ಬಾರಿ ಅಧಿಕಾರ ಬದಲಾವಣೆಯ ಮುನ್ಸೂಚನೆ ಸಿಗುತ್ತಿದ್ದು, ಅಂತಿಮ ಫಲಿತಾಂಶದ ಮೇಲೆ ಎಲ್ಲರ ಕುತೂಹಲ ನೆಟ್ಟಿದೆ.

#WATCH | West Bengal Elections 2026 | Kolkata: BJP workers distribute sweets outside the counting centre in Bhabanipur assembly constituency as BJP crosses the majority mark in the state.

In the constituency, CM Mamata Banerjee is leading over BJP's Suvendu Adhikari by a… pic.twitter.com/XE75HGOSxC

— ANI (@ANI) May 4, 2026

BREAKING: BJP on the verge of majority in West Bengal Assembly elections: Fans celebrate by sharing sweets | WATCH VIDEO
Share. Facebook Twitter LinkedIn WhatsApp Email

Related Posts

BREAKING : ಟ್ರಾನ್ಸ್‌ ಜೆಂಡರ್ ತಿದ್ದುಪಡಿ ಮಸೂದೆ : ಸುಪ್ರೀಂ ಕೋರ್ಟ್‌ನಿಂದ ಕೇಂದ್ರ ಮತ್ತು ರಾಜ್ಯಗಳಿಗೆ ನೋಟಿಸ್ ಜಾರಿ.!

04/05/2026 11:41 AM1 Min Read

BREAKING : ತಮಿಳುನಾಡಲ್ಲಿ ಮ್ಯಾಜಿಕ್ ನಂಬರ್ ಸಮೀಪ ‘TVK’ ಪಕ್ಷ : ನಟ ವಿಜಯ್ ಮನೆಯಲ್ಲಿ ಸಂಭ್ರಮಾಚರಣೆ

04/05/2026 11:29 AM1 Min Read

ALERT : ನಿಮ್ಮ ವಾಹನಕ್ಕೆ ‘ಫಾಸ್ಟ್‌ ಟ್ಯಾಗ್’ ಅಂಟಿಸದಿದ್ದರೆ ಕಾರ್ಡ್ ಬ್ಲಾಕ್ : `NHAI’ ಎಚ್ಚರಿಕೆ.!

04/05/2026 11:29 AM1 Min Read
Recent News

BREAKING : ಕರ್ನಾಟಕ ಉಪಚುನಾವಣೆ : ಬಾಗಲಕೋಟೆಯಲ್ಲಿ ಉಮೇಶ್ ಮೇಟಿಗೆ ಭರ್ಜರಿ ಗೆಲುವು!

04/05/2026 12:11 PM

BREAKING : ಬಾಗಲಕೋಟೆ ವಿಧಾನಸಭೆ ಉಪಚುನಾವಣೆ ಫಲಿತಾಂಶ : ಕಾಂಗ್ರೆಸ್ ಅಭ್ಯರ್ಥಿ ಉಮೇಶ್ ಮೇಟಿ ಭರ್ಜರಿ ಗೆಲುವು

04/05/2026 12:06 PM

BREAKING : ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಯಲ್ಲಿ ಬಹುಮತದತ್ತ ಬಿಜೆಪಿ : ಸಿಹಿ ಹಂಚಿ ಅಭಿಮಾನಿಗಳ ಸಂಭ್ರಮ | WATCH VIDEO

04/05/2026 11:47 AM

BIG NEWS : ದಾವಣಗೆರೆಯಲ್ಲಿ ನಮಗೆ ಸ್ವಲ್ಪ ಹಿನ್ನಡೆ ಆಗಬಹುದು : ಸಿಎಂ ಸಿದ್ದರಾಮಯ್ಯ ಅಚ್ಚರಿ ಹೇಳಿಕೆ!

04/05/2026 11:45 AM
State News
KARNATAKA

BREAKING : ಕರ್ನಾಟಕ ಉಪಚುನಾವಣೆ : ಬಾಗಲಕೋಟೆಯಲ್ಲಿ ಉಮೇಶ್ ಮೇಟಿಗೆ ಭರ್ಜರಿ ಗೆಲುವು!

By kannadanewsnow0504/05/2026 12:11 PM KARNATAKA 1 Min Read

ಬಾಗಲಕೋಟೆ : ಕರ್ನಾಟಕ ಉಪಚುನಾವಣೆಯಲ್ಲಿ ಇದೀಗ ಬಾಗಲಕೋಟೆ ಕ್ಷೇತ್ರದಲ್ಲಿ ಉಮೇಶ್ ಮೇಟಿ ಅವರು ಭರ್ಜರಿ ಗೆಲುವು ಸಾಧಿಸಿದ್ದಾರೆ. ಒಟ್ಟು 20…

BREAKING : ಬಾಗಲಕೋಟೆ ವಿಧಾನಸಭೆ ಉಪಚುನಾವಣೆ ಫಲಿತಾಂಶ : ಕಾಂಗ್ರೆಸ್ ಅಭ್ಯರ್ಥಿ ಉಮೇಶ್ ಮೇಟಿ ಭರ್ಜರಿ ಗೆಲುವು

04/05/2026 12:06 PM

BIG NEWS : ದಾವಣಗೆರೆಯಲ್ಲಿ ನಮಗೆ ಸ್ವಲ್ಪ ಹಿನ್ನಡೆ ಆಗಬಹುದು : ಸಿಎಂ ಸಿದ್ದರಾಮಯ್ಯ ಅಚ್ಚರಿ ಹೇಳಿಕೆ!

04/05/2026 11:45 AM

BREAKING : ರೇಣುಕಾ ಸ್ವಾಮಿ ಕೊಲೆ ಕೇಸ್ : 1 ವಾರದಲ್ಲಿ ವರದಿ ನೀಡಿ : ರಾಜ್ಯ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ನೋಟಿಸ್ ಜಾರಿ!

04/05/2026 11:22 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.