ನವದೆಹಲಿ : ರಾಜ್ಯ ಬಿಜೆಪಿಯಲ್ಲಿನ ಬಣ ಬಡಿದಾಟ ಇದೀಗ ದೆಹಲಿ ಅಂಗಳಕ್ಕೂ ತಲುಪಿದ್ದು, ಬಿಜೆಪಿಯ ರೆಬೆಲ್ಸ್ ನಾಯಕರು ಇಂದು ದೆಹಲಿಯಲ್ಲಿ ಬಿಜೆಪಿ ಹೈಕಮಾಂಡ್ ಅವರನ್ನು ಭೇಟಿಯಾಗಿ ಬಿಜೆಪಿಯ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ವಿರುದ್ಧ ದೂರು ನೀಡಿದ್ದಾರೆ ಎಂದು ತಿಳಿದುಬಂದಿದೆ.
ಹೌದು ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ವಿರುದ್ಧ ಇದೀಗ ರೆಬೆಲ್ಸ್ ನಾಯಕರು ಹೈಕಮಾಂಡ್ಗೆ ದೂರು ನೀಡಿದ್ದಾರೆ.ರಾಜ್ಯಾಧ್ಯಕ್ಷ ಸ್ಥಾನದಲ್ಲಿ ವಿಜಯೇಂದ್ರ ಮುಂದುವರಿಸದಂತೆ ಹೈಕಮಾಂಡ್ ಅವರಲ್ಲಿ ಮನವಿ ಮಾಡಿದ್ದಾರೆ. ರಾಷ್ಟೀಯ ಅಧ್ಯಕ್ಷ ಜೆಪಿ ನಡ್ಡಾ ಅವರನ್ನು ಭೇಟಿಯಾಗಿ ರಮೇಶ್ ಜಾರಕಿಹೊಳಿ ಹಾಗೂ ಕುಮಾರ್ ಬಂಗಾರಪ್ಪ ಅವರು ಚರ್ಚಿಸಿದ್ದಾರೆ. ರಾಜ್ಯದ ಸ್ಥಿತಿ ಹೈಕಮಾಂಡ್ಗೆ ಮನವರಿಕೆ ಮಾಡಿಕೊಟ್ಟಿದ್ದಾರೆ.
ಈ ವೇಳೆ ಮಾಧ್ಯಮಗಳೊಂದಿಗೆ ಮಾತನಾಡಿದ ರಮೇಶ್ ಜಾರಕಿಹೊಳಿ, ವಿಜಯೇಂದ್ರ ರೀತಿಯಲ್ಲಿ ಹತಾಶೆ ಭಾವನೆಯಲ್ಲಿ ಮಾತನಾಡಲ್ಲ. ನಮ್ಮ ಪಕ್ಷದ ಹೈಕಮಾಂಡ್ಗೆ ಮನವರಿಕೆ ಮಾಡಿಕೊಂಡಿದ್ದೇವೆ ಅವರು ಏನು ನಿರ್ಧಾರ ಮಾಡುತ್ತಾರೆ ತಲೆಬಾಗಿ ಸ್ವೀಕರಿಸುತ್ತೇವೆ. ವಿಜಯೇಂದ್ರ ಕರ್ಮಕಾಂಡ ಬಿಚ್ಚಿಡುವ ಬಗ್ಗೆ ಯತ್ನಾಳ್ ಅವರನ್ನೇ ಕೇಳಿ ಎಂದು ದೆಹಲಿಯಲ್ಲಿ ಬಿಜೆಪಿ ಶಾಸಕ ರಮೇಶ್ ಜಾರಕಿಹೊಳಿ ಹೇಳಿಕೆ ನೀಡಿದರು.