ಬೆಂಗಳೂರು : ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಇದೀಗ ಬಿಜೆಪಿ 5ನೇ ಪಟ್ಟಿ ಬಿಡುಗಡೆ ಮಾಡಿದ್ದು ರಾಜ್ಯದ ನಾಲ್ಕು ಲೋಕಸಭಾ ಕ್ಷೇತ್ರಗಳಿಗೆ ಅಭ್ಯರ್ಥಿಗಳ ಹೆಸರನ್ನು ಘೋಷಣೆ ಮಾಡಿದೆ.ಕಾಂಗ್ರೆಸ್ ಸರ್ಕಾರದ ವಿರುದ್ಧ ಹಾಗೂ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ತೀವ್ರವಾಗಿ ಹಾಗೂ ವಿವಾದಾತ್ಮಕ ಹೇಳಿಕೆ ನೀಡಿದ್ದ ಉತ್ತರ ಕನ್ನಡ ಲೋಕಸಭಾ ಕ್ಷೇತ್ರದ ಅನಂತ್ ಕುಮಾರ್ ಹೆಗಡೆ ಬದಲು ಇದೀಗ ಹೈಕಮಾಂಡ್ ವಿಶ್ವೇಶ್ವರ ಹೆಗಡೆ ಕಾಗೇರಿಗೆ ಟಿಕೆಟ್ ನೀಡಿದೆ.
ಅಲ್ಲದೆ ಇದೇ ವೇಳೆ ಇತ್ತೀಚಿಗೆ ಕಾಂಗ್ರೆಸ್ ಪಕ್ಷ ತೊರೆದು ಬಿಜೆಪಿ ಸೇರಿದ ಜಗದೀಶ್ ಶೆಟ್ಟರಿಗೆ ಹಾವೇರಿ ಲೋಕಸಭಾ ಕ್ಷೇತ್ರದ ಬದಲು ಬೆಳಗಾವಿ ಲೋಕಸಭಾ ಕ್ಷೇತ್ರಕ್ಕೆ ಟಿಕೆಟ್ ನೀಡಲಾಗಿದೆ. ಅಲ್ಲದೆ ಹೈಕಮಾಂಡ್ ವಿಶ್ವಾಸ ಗಳಿಸುವಲ್ಲಿ ಯಶಸ್ವಿಯಾಗಿರುವ ಬಿಜೆಪಿಯ ಮಾಜಿ ಸಚಿವ ಸುಧಾಕರ್ ಅವರಿಗೆ ಕೂಡ ಚಿಕ್ಕಬಳ್ಳಾಪುರ ಕ್ಷೇತ್ರದಿಂದ ಟಿಕೆಟ್ ಸಿಕ್ಕಿದೆ.ಬಿಜೆಪಿ 5ನೇ ಪಟ್ಟೆ ಬಿಡುಗಡೆಯಾಗಿದ್ದು, ಕರ್ನಾಟಕದ ನಾಲ್ಕು ಕ್ಷೇತ್ರಗಳಿಗೆ ಅಭ್ಯರ್ಥಿಗಳ ಹೆಸರನ್ನು ಘೋಷಣೆ ಮಾಡಿದ್ದು, ಅಭ್ಯರ್ಥಿಗಳ ಪಟ್ಟಿ ಇಲ್ಲಿದೆ
1) ಉತ್ತರ ಕನ್ನಡ ಲೋಕಸಭಾ ಕ್ಷೇತ್ರ – ವಿಶ್ವೇಶ್ವರ ಹೆಗಡೆ ಕಾಗೇರಿ
2)ಚಿಕ್ಕಬಳ್ಳಾಪುರ ಕ್ಷೇತ್ರ -ಡಾ. ಕೆ ಸುಧಾಕರ್
3) ಬೆಳಗಾವಿ ಲೋಕಸಭಾ ಕ್ಷೇತ್ರ- ಜಗದೀಶ್ ಶೆಟ್ಟರ್
4). ರಾಯಚೂರು ಲೋಕಸಭಾ ಕ್ಷೇತ್ರ-ರಾಜಾಅಮರೇಶ್ವರ ನಾಯಕಗೆ ಬಿಜೆಪಿ ಟಿಕೇಟ್ ನೀಡಿದೆ.