ಬೆಳಗಾವಿ : ತೀವ್ರ ಕುತೂಹಲ ಮೂಡಿಸಿದ ಬೆಳಗಾವಿಯ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಕೊನೆಗೂ ಬಿಜೆಪಿ ಅಧಿಕಾರದ ಚುಕ್ಕಾಣಿ ಹಿಡಿಯಲು ಯಶಸ್ವಿಯಾಗಿದೆ. ಪಾಲಿಕೆಯ ನೂತನ ಮೇಯರ್ ಆಗಿ ಮಂಗೇಶ್ ಪವಾರ್ ಹಾಗೂ ಉಪಮೇಯರ್ ಆಗಿ ವಾಣಿವಿಲಾಸ್ ಜೋಶಿ ಅವರು ಆಯ್ಕೆಯಾಗಿದ್ದಾರೆ.
ಬೆಳಗಾವಿಯ ನೂತನ ಮೇಯರ್ ಆಗಿ ಮಂಗೇಶ್ ಪವಾರ್, ಉಪ ಮೇಯರ್ ಆಗಿ ವಾಣಿ ವಿಲಾಸ್ ಜೋಶಿ ಆಯ್ಕೆಯಾಗಿದ್ದಾರೆ. ಚುನಾವಣಾ ಅಧಿಕಾರಿ ಕೈ ಎತ್ತುವ ಮೂಲಕ ಆಯ್ಕೆಗೆ ಅವಕಾಶ ನೀಡಿದ್ದರು. ಮಂಗೇಶ್ ಪರವಾಗಿ 40 ಮತಗಳು ವಿರುದ್ಧವಾಗಿ 5 ಮತಗಳು ಚಲಾವಣೆ ಆಗಿವೆ.
ಅದೇ ರೀತಿ ವೀಣಾ ಪರವಾಗಿ 40 ಹಾಗು ವಿರುದ್ಧವಾಗಿ 19 ಮತಗಳು ಚಲಾವಣೆ ಆಗಿವೆ. ಮೂರನೇ ಅವಧಿಗೆ ಮೇಯರ್ ಉಪಮೇಯರ್ ಸ್ಥಾನಕ್ಕೆ ಚುನಾವಣೆ ನಡೆದಿತ್ತು. ಇದೀಗ ಬೆಳಗಾವಿಯ ಪಾಲಿಕೆ ಚುನಾವಣೆಯಲ್ಲಿ ಕಾಂಗ್ರೆಸ್ ಗೆ ತೀವ್ರ ಮುಖಭಂಗ ಆಗಿದ್ದು ಬಿಜೆಪಿ ಅಧಿಕಾರದ ಚುಕ್ಕಾಣಿ ಹಿಡಿಯುವ ಮೂಲಕ ಜಯಭೇರಿ ಬಾರಿಸಿದೆ.
ಸದಸ್ಯತ್ವ ರದ್ದಾದರು ಬಿಜೆಪಿಗೆ ಗೆಲುವು
ಪತ್ನಿಯರ ಹೆಸರಿನಲ್ಲಿ ಮಳಿಗೆ ಪಡೆದಿದ್ದಕ್ಕೆ ಇಬ್ಬರು ಬಿಜೆಪಿ ಸದಸ್ಯರ ಸದಸ್ಯತ್ವ ರದ್ದಾಗಿತ್ತು. ಸುಜೀತ್ ಮುಳಗುಂದ ಎಂಬಾತರಿಂದ ಬಿಜೆಪಿ ಸದಸ್ಯರ ಸದಸ್ಯತ್ವ ರದ್ದು ಮಾಡುವಂತೆ ದೂರು ನೀಡಿದ್ರು. ದೂರಿನ ವಿಚಾರಣೆ ನಡೆಸಿದ ಬೆಳಗಾವಿ ಪ್ರಾದೇಶಿಕ ಆಯುಕ್ತರು ಸದಸ್ಯತ್ವ ರದ್ದು ಮಾಡಿ ಆದೇಶಿಸಿದ್ದರು.
ಪ್ರಾದೇಶಿಕ ಆಯುಕ್ತರ ಆದೇಶವನ್ನ ಪ್ರಶ್ನಿಸಿ ಸದಸ್ಯರು, ಧಾರವಾಡ ಹೈಕೋರ್ಟ್ ಮೊರೆ ಹೋಗಿದ್ದರು. ಅಲ್ಲಿ ಬಿಜೆಪಿ ಸದಸ್ಯರಿಗೆ ಹಿನ್ನಡೆಯಾಗಿತ್ತು. ಸದಸ್ಯತ್ವ ರದ್ದು ಪ್ರಕರಣ ಸರ್ಕಾರದ ಮುಂದೆ ಹೋಗಿತ್ತು. ಸರ್ಕಾರ ಕೂಡಾ ಪ್ರಾದೇಶಿಕ ಆಯುಕ್ತರ ಆದೇಶವನ್ನ ಎತ್ತಿ ಹಿಡದಿತ್ತು.ಕಳೆದ 2 ದಿನಗಳ ಹಿಂದೆ ಸದಸ್ಯರ ಸದಸ್ಯತ್ವ ರದ್ದುಗೊಳಿಸಿದ್ದ ಪ್ರಕರಣಕ್ಕೆ ಹೈಕೋರ್ಟ್ ತಡೆಯಾಜ್ಞೆ ನೀಡಿದೆ.