ಬೆಂಗಳೂರು : ನಿನ್ನೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ನಡೆದಂತಹ ಸಚಿವ ಸಂಪುಟ ಸಭೆಯಲ್ಲಿ ಒಟ್ಟು 43 ಪ್ರಕರಣಗಳನ್ನು ಸಂಪುಟ ಹಿಂಪಡೆದಿತ್ತು. ಈ ಒಂದು 43 ಕೇಸ್ ಗಳಲ್ಲಿ ಹಳೆ ಹುಬ್ಬಳ್ಳಿ ಗಲಭೆ ಪ್ರಕರಣ ಕೂಡ ಒಂದಾಗಿದೆ. ಹಾಗಾಗಿ ರಾಜ್ಯ ಸರ್ಕಾರ ಮುಸ್ಲಿಮರ ಓಲೈಕೆಗೆ ಮುಂದಾಗಿದೆಯಾ ಎಂಬ ಅನುಮಾನ ಮೂಡುತ್ತಿದೆ.
ಹೌದು ಹಳೆ ಹುಬ್ಬಳ್ಳಿ ಗಲಭೆ ಪ್ರಕರಣವನ್ನು ರಾಜ್ಯ ಸರ್ಕಾರ ಹಿಂಪಡೆದಿದೆ. 16.4.2022 ರಂದು ಹಳೆ ಹುಬ್ಬಳ್ಳಿಯಲ್ಲಿ ಮುಸ್ಲಿಂ ಗಲಭೆ ಪ್ರಕರಣ ನಡೆದಿದೆ. 43 ಕೇಸ್ ಪ್ರಕರಣಗಳನ್ನು ಪಡೆದಿದೆ. ಆ ಒಂದು 43 ಪ್ರಕರಣಗಳಲ್ಲಿ ಹುಬ್ಬಳ್ಳಿಯ ಗಲಭೆ ಕೇಸ್ ಕೂಡ ಒಂದಾಗಿದೆ. ಹುಬ್ಬಳ್ಳಿಯ ಹಳೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಒಂದು ಗಲಭೆ ನಡೆದಿತ್ತು.
ಪ್ರಕರಣ ಹಿನ್ನೆಲೆ?
ಮಸೀದಿ ಮೇಲೆ ಭಗವಾಧ್ವಜ ಇರುವ ಫೋಟೋವನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಕ್ಕೆ ಏಪ್ರಿಲ್ 16, 2022ರಂದು ಹಳೇ ಹುಬ್ಬಳ್ಳಿ ಪೊಲೀಸ್ ಠಾಣೆ ಎದುರು ಗಲಭೆ ನಡೆದಿತ್ತು. ಸಾವಿರಾರು ಮುಸ್ಲಿಮರು ಪೊಲೀಸ್ ಠಾಣೆ ಮುಂದೆ ಸೇರಿ ಗಲಾಟೆ ನಡೆಸಿದ್ದರು. ಈ ವೇಳೆ ಬೆಂಗಳೂರಿನ ಡಿಜೆ ಹಳ್ಳಿ-ಕೆಜೆ ಹಳ್ಳಿ ಪ್ರಕರಣದ ರೀತಿ ಪೊಲೀಸ್ ಠಾಣೆ, ಆಸ್ಪತ್ರೆ, ದೇವಸ್ಥಾನ, ಮನೆಗಳ ಮೇಲೆ ಕಲ್ಲು ತೂರಾಟ ಕೂಡ ನಡೆದಿತ್ತು.
ಘಟನೆಯಲ್ಲಿ ಗಲಾಟೆಯಲ್ಲಿ 10ಕ್ಕೂ ಹೆಚ್ಚು ಪೊಲೀಸ್ ವಾಹನಗಳು ಜಖಂಗೊಂಡಿದ್ದು, ಇನ್ಸ್ಪೆಕ್ಟರ್ ಸೇರಿ 7 ಸಿಬ್ಬಂದಿ ಮೇಲೆ ಹಲ್ಲೆಯಾಗಿತ್ತು. ಈ ಹಿನ್ನಲೆಯಲ್ಲಿ ಪರಿಸ್ಥಿತಿಯನ್ನು ನಿಯಂತ್ರಿಸಲು ಪೊಲೀಸರು ಗಾಳಿಯಲ್ಲಿ ಗುಂಡು ಹಾರಿಸಿದ್ದರು. ಇನ್ನು ಈ ಗಲಭೆ ಸಂಬಂಧ ಹಳೇ ಹುಬ್ಬಳ್ಳಿ ಪೊಲೀಸ್ ಠಾಣೆಯಲ್ಲಿ 12 ಪ್ರಕರಣಗಳು ದಾಖಲಾಗಿದ್ದು, ಒಟ್ಟು 152 ಆರೋಪಿಗಳ ಬಂಧನವಾಗಿತ್ತು.