ಬೆಳಗಾವಿ : ಹಿಂದೂ ಬೆಳಗಾವಿಯ ಸಿಪಿಯೇಟ್ ಮೈದಾನದಲ್ಲಿ ಕೇಂದ್ರ ಸರ್ಕಾರದ ವಿರುದ್ಧ ಕಾಂಗ್ರೆಸ್ ಭರತ್ ಸಮಾವೇಶ ಹಮ್ಮಿಕೊಂಡಿದ್ದು ಈ ಒಂದು ಸಮಾವೇಶದಲ್ಲಿ ಬಿಜೆಪಿಯಿಂದ ದೊಡ್ಡ ಹೈಡ್ರಾಮವೇ ನಡೆಯಿತು. ಸಮಾವೇಶದಲ್ಲಿ ಸಿಎಂ ಸಿದ್ದರಾಮಯ್ಯ ಭಾಷಣದ ವೇಳೆ ಬಿಜೆಪಿ ಮಹಿಳಾ ಕಾರ್ಯಕರ್ತರು ಕಪ್ಪು ಬಾವುಟ ಪ್ರದರ್ಶಿಸಿದರು. ತಕ್ಷಣ ಪೊಲೀಸರು ಮಹಿಳಾ ಕಾರ್ಯಕರ್ತೆಯರನ್ನು ವಶಕ್ಕೆ ಪಡೆದುಕೊಂಡರು.
ಹೌದು ಬೆಳಗಾವಿಯ ಸಿಪಿಎಡ್ ಮೈದಾನದಲ್ಲಿ ಕೇಂದ್ರ ಸರ್ಕಾರದ ವಿರುದ್ಧದ ಕಾಂಗ್ರೆಸ್ ಬೃಹತ್ ಪ್ರತಿಭಟನಾ ಸಮಾವೇಶದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಭಾಷಣದ ವೇಳೆ ಹೈಡ್ರಾಮಾ ನಡೆಯಿತು. ಬಿಜೆಪಿ ಮಹಿಳಾ ಕಾರ್ಯಕರ್ತೆಯರು ಕಪ್ಪು ಬಾವುಟ ಪ್ರದರ್ಶಿಸಿ ಸಮಾವೇಶಕ್ಕೆ ಕೆಲ ಕಾಲ ಅಡ್ಡಿಪಡಿಸಿದ ಘಟನೆ ನಡೆದಿದೆ.
ಸಿಎಂ ಸಿದ್ದರಾಮಯ್ಯ ಭಾಷಣ ಆರಂಭಿಸುತ್ತಿದ್ದಂತೆಯೇ ಸಮಾವೇಶದಲ್ಲಿ ನೆರೆದಿದ್ದ ಜನರ ಹಿಂದೆ ಕಾಂಗ್ರೆಸ್ ಕಾರ್ಯಕರ್ತರಂತೆ ಕುಳಿತಿದ್ದ ಬಿಜೆಪಿ ಮಹಿಳಾ ಕಾರ್ಯಕರ್ತರು ಕಪ್ಪುಪಟ್ಟಿ ಪ್ರದರ್ಶಿಸಿ, ರಾಜ್ಯ ಸರ್ಕಾರದ ವಿರುದ್ಧ ದಿಕ್ಕಾರ ಕೂಗಲಾರಂಭಿಸಿದ್ದಾರೆ. ಏಕಾಏಕಿ ವೇದಿಕೆಯತ್ತ ಮುನ್ನುಗ್ಗಲು ಯತ್ನಿಸಿದ್ದಾರೆ.ತಕ್ಷಣ ಸಿಎಂ ಸಿದ್ದರಾಮಯ್ಯ ಅವರು ಭಾಷಣ ನಿಲ್ಲಿಸಿ ಇಲ್ಲಿಯ ಎಸ್ಪಿ ಯಾರು ಎಂದು ವೇದಿಕೆಯಲ್ಲಿಯೇ ಕೇಳಿದರು.
ಕೂಡಲೇ ಎಸ್‌ಪಿ ಅವರು ಬಂದು ಪರಿಸ್ಥಿತಿಯ ಬಗ್ಗೆ ವಿವರಿಸುತ್ತಿದ್ದಾಗ, ಎಸ್ಪಿ ಅವರ ಮೇಲೆ ಸಿಎಂ ಸಿದ್ದರಾಮಯ್ಯ ಗರಂ ಆದರು ಏನ್ರೀ ಮಾಡುತ್ತಿದ್ದೀರಾ? ಕಾಂಗ್ರೆಸ್ ಸಮಾವೇಶದಲ್ಲಿ ಬಿಜೆಪಿಯವರು ಬಂದು ಗಲಾಟೆ ಮಾಡುತ್ತಿದ್ದಾರೆ ನೋಡಿಕೊಂಡು ಸುಮ್ಮನೆ ಕುಳಿತಿದ್ದೀರಾ? ಎಂದು ತರಾಟೆಗೆ ತೆಗೆದುಕೊಂಡ ಘಟನೆ ನಡೆಯಿತು. ಬಳಿಕ ಬಿಜೆಪಿ ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ತೆಗೆದುಕೊಂಡರು.