ಕಲಬುರ್ಗಿ : ಕಲ್ಬುರ್ಗಿಯಲ್ಲಿ ಬಿಜೆಪಿ ಕಾರ್ಯಕರ್ತೆ ಜ್ಯೋತಿ ಪಾಟೀಲ್ ಮೈ ಮೇಲೆ ಪೆಟ್ರೋಲ್ ಸುರಿದುಕೊಂಡು ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಕಲಬುರ್ಗಿ ತಾಲೂಕಿನ ನಂದಿಕೂರ ಗ್ರಾಮದ ಬಳಿ ನಿನ್ನೆ ರಾತ್ರಿ ನಡೆದಿದೆ.
ನಂದಿಕೂರ ಗ್ರಾಮದಲ್ಲಿ ಮಲ್ಲಿನಾಥ ಬಿರಾದಾರ್ ಮನೆಯಲ್ಲಿ ಜ್ಯೋತಿ ಪಾಟೀಲ್ ಆತ್ಮಹತ್ಯೆ ಶರಣಾಗಿದ್ದಾರೆ.ಬಿಜೆಪಿ ಕಾರ್ಯಕರ್ತನಾಗಿರುವ ನಂದಿಕೂರ್ ಗ್ರಾಮದ ಮಲ್ಲಿನಾಥ್ ಮನೆಯಲ್ಲಿ ಇಲ್ಲದ ವೇಳೆ ಜ್ಯೋತಿ ಪಾಟೀಲ್ ಬಾಗಿಲು ಬಡಿದು ಎಬ್ಬಿಸಿದ್ದಾರೆ. ಮಲ್ಲಿನಾಥ ಬಿರಾದರ್ ಪತ್ನಿ, ಮೂವರು ಮಕ್ಕಳು ಮನೆಯಲ್ಲಿ ವಾಸವಿದ್ದರು.
ಬಾಗಿಲು ತೆರೆದ ತಕ್ಷಣ ಜ್ಯೋತಿ ಪಾಟೀಲ್ ಬೆಂಕಿ ಹಚ್ಚಿಕೊಂಡಿದ್ದಾರೆ ಜ್ಯೋತಿ ಪಾಟೀಲ್ ಕಲಬುರ್ಗಿಯ ಬ್ರಹ್ಮಪುರ ಬಡಾವಣೆಯ ನಿವಾಸಿ ಎಂದು ತಿಳಿದುಬಂದಿದೆ. ಘಟನೆ ಕುರಿತು ಫರತಾಬಾದ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.








