ಬೆಂಗಳೂರು : ಬಿಜೆಪಿ ಕಾರ್ಯಕರ್ತ ವಿನಯ್ ಸೋಮಯ್ಯ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯೆ ನೀಡಿದ್ದು, ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಲಾಗುತ್ತದೆ ಎಂದು ತಿಳಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿ ಕಾರ್ಯಕರ್ತ ವಿನಯ್ ಸೋಮಯ್ಯ ಆತ್ಮಹತ್ಯೆ ಪ್ರಕರಣದ ತನಿಖೆ ಸಂಪೂರ್ಣವಾಗಿ ಮುಗಿದ ಬಳಿಕ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
ಪ್ರಕರಣದ ತನಿಖೆ ನಡೆಯುತ್ತಿದೆ, ಪೊಲೀಸರು ಎಫ್ ಐ ಆರ್ ದಾಖಲಿಸಿ ತನಿಖೆ ನಡೆಸುತ್ತಿದ್ದಾರೆ.ಹೀಗಾಗಿ ಅದರ ಬಗ್ಗೆ ಹೆಚ್ಚ ಮಾತನಾಡಲ್ಲ. ಬಿಜೆಪಿಯವರು ಸಾವಿನಲ್ಲೂ ರಾಜಕೀಯ ಮಾಡುತ್ತಿದ್ದಾರೆ ಎಂದು ಕಿಡಿಕಾರಿದ್ದಾರೆ.