ಮಡಿಕೇರಿ : ಬಿಜೆಪಿ ಕಾರ್ಯಕರ್ತ ವಿನಯ್ ಸೋಮಯ್ಯ ಆತ್ಮಹತ್ಯೆ ಖಂಡಿಸಿ ಇಂದು ಕುಶಾಲನಗರದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ನೇತೃತ್ವದಲ್ಲಿ ಬಿಜೆಪಿ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದಾರೆ.
ಈ ವೇಳೆ ಮಾತನಾಡಿದ ಬಿ.ವೈ. ವಿಜಯೇಂದ್ರ, ವಿನಯ್ ಆತ್ಮಹತ್ಯೆ ಪ್ರಕರಣವನ್ನು ಸಿಬಿಐಗೆ ತನಿಖೆಗೆ ನೀಡದಿದ್ದರೆ ಪೊಲೀಸ್ ಠಾಣೆಗೆ ಮುತ್ತಿಗೆ ಹಾಕೋಣ, ರಾಜ್ಯ ಸರ್ಕಾರವು ವಿನಯ್ ಆತ್ಮಹತ್ಯೆ ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸಿದ್ರೆ ಮಾತ್ರ ವಿನಯ್ ಸಾವಿಗೆ ನ್ಯಾಯ ಸಿಗಲಿದೆ ಎಂದರು.
ಇಂದು ಕುಶಾಲನಗರದಲ್ಲಿ ವಿನಯ್ ಆತ್ಮಹತ್ಯೆ ಖಂಡಿಸಿ ಬಿಜೆಪಿ ನಾಯಕರು ಪ್ರತಿಭಟನೆ ನಡೆಸುತ್ತಿದ್ದು, ಈ ವೇಳೆ ಡಿವೈಎಸ್ ಪಿ ಕಚೇರಿಗೆ ಮುತ್ತಿಗೆಗೆ ಯತ್ನಿಸಲಾಗಿದ್ದು, ಪೊಲೀಸರು ಬಿ.ವೈ.ವಿಜಯೇಂದ್ರ ಸೇರಿದಂತೆ ಹಲವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.