ಕುಶಾಲನಗರ : ಬಿಜೆಪಿ ಕಾರ್ಯಕರ್ತ ವಿನಯ್ ಸೋಮಯ್ಯ ಆತ್ಮಹತ್ಯೆ ಪ್ರಕರಣವನ್ನು ಸಿಬಿಐಗೆ ವಹಿಸಬೇಕು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಒತ್ತಾಯಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿ ಕಾರ್ಯಕರ್ತ ವಿನಯ್ ಸೋಮಯ್ಯ ಆತ್ಮಹತ್ಯೆ ಪ್ರಕರಣವನ್ನು ಸಿಬಿಐಗೆ ವಹಿಸಬೇಕು. ಸ್ಥಳೀಯ ಪೊಲೀಸರ ಮೇಲೆ ನಂಬಿಕೆ ಇಲ್ಲ. ವಿನಯ್ ಸಾವಿಗೆ ನ್ಯಾಯ ಸಿಗಬೇಕು ಎಂದರೆ ಸಿಬಿಐ ತನಿಖೆಗೆ ವಹಿಸಬೇಕು ಎಂದು ಹೇಳಿದ್ದಾರೆ.
ಹೈಕೋರ್ಟ್ ನಿಂದ ತಡೆಯಾಜ್ಞೆ ಬಳಿಕವೂ ವಿನಯ್ ಗೆ ಕಿರುಕುಳ ನೀಡಲಾಗಿದೆ. ಇದರಿಂದ ಮನನೊಂದು ವಿನಯ್ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಡೆತ್ ನೋಟ್ ನಲ್ಲಿ ಆತ್ಮಹತ್ಯೆಗೆ ಕಾರಣ ಯಾರು ಎಂದು ಉಲ್ಲೇಖಿಸಲಾಗಿದೆ. ಬೆಂಗಳೂರಿನಲ್ಲಿ ದಾಖಲಾದ ಕೇಸ್ ನಲ್ಲಿ ಶಾಸಕರ ಹೆಸರು ಸೇರಿಸಲಾಗಿಲ್ಲ. ಪೊಲೀಸರ ಮೇಲೆ ಎಷ್ಟು ಒತ್ತಡ ಇರಬಹುದೆಂದು ಇದರಿಂದ ಗೊತ್ತಾಗುತ್ತದೆ. ಪೊನ್ನಣ್ಣ ಸಿಎಂ ಕಾನೂನು ಸಲಹೆಗಾರ, ಮಂತರ್ ಪ್ರಭಾವಿ ಶಾಸಕ, ಇವರಿಬ್ಬರ ಕಿರುಕುಳದಿಂದ ವಿನಯ್ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವಿಜಯೇಂದ್ರ ಆರೋಪಿಸಿದ್ದಾರೆ.