ಮೈಸೂರು : ಮುಡಾ ಹಗರಣ ಸಂಬಂಧ ತನಿಖೆಗೆ ಕೋರ್ಟ್ ಆದೇಶ ನೀಡಿರುವ ಹಿನ್ನೆಲೆಯಲ್ಲಿ ಸಿಎಂ ಸಿದ್ದರಾಮಯ್ಯ ರಾಜೀನಾಮೆ ನೀಡುವಂತೆ ಆಗ್ರಹಿಸಿ ಬಿಜೆಪಿ ಕಾರ್ಯಕರ್ತರು ಮೈಸೂರಿನಲ್ಲಿ ಪ್ರತಿಭಟನೆ ನಡೆಸುತ್ತಿದ್ದಾರೆ.
ಇಂದು ಮೈಸೂರು ಪ್ರವಾಸ ಕೈಗೊಂಡಿರುವ ಸಿಎಂ ಸಿದ್ದರಾಮಯ್ಯ ಜಿಲ್ಲಾ ಪಂಚಾಯಿತಿ ಕಚೇರಿಯಲ್ಲಿ ಸಭೆ ನಡೆಸಲಿದ್ದಾರೆ. ಹೀಗಾಗಿ ಜಿ.ಪಂ ಕಚೇರಿಗೆ ಮುತ್ತಿಗೆ ಹಾಕಲು ಬಿಜೆಪಿ ಕಾರ್ಯಕರ್ತರು ನಿರ್ಧರಿಸಿದ್ದರು. ಈ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕೆಯಾಗಿ ಪೊಲೀಸರು ಮೈಸೂರಿನ ಬಿಜೆಪಿ ಕಚೇರಿಯ ಮುಂಭಾಗದಲ್ಲೇ ಪ್ರತಿಭಟನಾಕಾರನನ್ನು ತಡೆದಿದ್ದು, ಅವರನ್ನು ವಶಕ್ಕೆ ಪಡೆದುಕೊಂಡಿದ್ದಾರೆ.
ಪೊಲೀಸರು ವಶಕ್ಕೆ ಪಡೆಯುತ್ತಿದ್ದಂತೆ ಸಿಎಂ ಸಿದ್ದರಾಮಯ್ಯ ವಿರುದ್ಧ ಬಿಜೆಪಿ ಪ್ರತಿಭಟನಾಕಾರರು ಧಿಕ್ಕಾರ ಕೂಗಿದ್ದಾರೆ. ಸಿಎಂ ಸಿದ್ದರಾಮಯ್ಯ ರಾಜೀನಾಮೆ ಕೊಡಲೇಬೇಕು ಎಂದು ಆಗ್ರಹಿಸಿದ್ದಾರೆ.