Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಚೀನಾ ಪ್ರವಾಸಕ್ಕೂ ಮುನ್ನ ಟ್ರಂಪ್ ‘ವಾರ್’ ಎಚ್ಚರಿಕೆ: ಇರಾನ್ ಕಳುಹಿಸಿದ ಕದನ ವಿರಾಮ ಪ್ರಸ್ತಾವನೆ ತಿರಸ್ಕರಿಸಿದ ಅಮೆರಿಕ!

ಹಾರ್ಮುಜ್ ಜಲಸಂಧಿಯಲ್ಲಿ ಹೈಡ್ರಾಮಾ: ಇರಾನ್ ಸಂಬಂಧಿತ ಎಲ್‌ಪಿಜಿ ಟ್ಯಾಂಕರ್‌ನಿಂದ ‘ಭಾರತೀಯ ಮಾಲೀಕತ್ವ’ದ ಸಂಕೇತ; ದಾಳಿ ತಪ್ಪಿಸಲು ಹೊಸ ತಂತ್ರ?

ಎಂದಿಗೂ ಹಾಳಾಗದ ’10 ಆಹಾರ ಪದಾರ್ಥ’ಗಳಿವು

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BREAKING : ಅಡ್ಡಸ್ಟೆಂಟ್ ರಾಜಕಾರಣದಿಂದ ಬಿಜೆಪಿ ಅವನತಿ ನಿಶ್ಚಿತ : ಉಚ್ಚಾಟನೆ ಬೆನ್ನಲ್ಲೆ ಶಾಸಕ ಯತ್ನಾಳ್
KARNATAKA

BREAKING : ಅಡ್ಡಸ್ಟೆಂಟ್ ರಾಜಕಾರಣದಿಂದ ಬಿಜೆಪಿ ಅವನತಿ ನಿಶ್ಚಿತ : ಉಚ್ಚಾಟನೆ ಬೆನ್ನಲ್ಲೆ ಶಾಸಕ ಯತ್ನಾಳ್

By kannadanewsnow57

ಬೆಂಗಳೂರು : ಸ್ವಪಕ್ಷ ನಾಯಕರ ವಿರುದ್ಧವೇ ವಾಗ್ದಾಳಿ ನಡೆಸಿದ್ದು ಅಲ್ಲದೆ, ಕಳೆದ ಫೆಬ್ರವರಿ 10ರಂದು ಬಿಜೆಪಿ ಕೇಂದ್ರೀಯ ಶಿಸ್ತು ಸಮಿತಿ ನೋಟಿಸ್ ಗೆ ಉತ್ತರಿಸದ ಹಿನ್ನೆಲೆಯಲ್ಲಿ ಇದೀಗ ವಿಜಯಪುರ ನಗರ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ ರನ್ನು ಬಿಜೆಪಿ ಕೇಂದ್ರೀಯ ಶಿಸ್ತು ಸಮಿತಿ 6 ವರ್ಷಗಳ ಕಾಲ ಉಚ್ಚಾಟನೆ ಮಾಡಿದೆ. ಈ ವಿಚಾರವಾಗಿ ಶಾಸಕ ಯತ್ನಾಳ್ ಕಿಡಿಕಾರಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ಶಾಸಕ ಯತ್ನಾಳ್, ಕೆಲ ರಾಜಕೀಯ ಪಟ್ಟಭದ್ರರು, ಅಡ್ಡಸ್ಟೆಂಟ್ ರಾಜಕಾರಣದ ಹರಿಕಾರರಿಂದ ಲೋಕ ಸಭಾ ಚುನಾವಣೆಯಲ್ಲಿ ಪಕ್ಷಕ್ಕೆ ತೀವ್ರ ಹಿನ್ನಡೆಯಾಯಿತು. ಕಲ್ಬುರ್ಗಿ, ರಾಯಚೂರು, ಬಳ್ಳಾರಿ, ಚಿಕ್ಕೋಡಿಯಲ್ಲಿ ಆದ ಸೋಲಿನ ಪರಾಮರ್ಶೆಯನ್ನು ಹೈ ಕಮಾಂಡ್ ಮಾಡದೆ ಇರುವುದು ಕಲ್ಯಾಣ ಕರ್ನಾಟಕದಲ್ಲಿ ಪಕ್ಷದ ಅವನತಿಗೆ ಕಾರಣವಾಗಿದೆ.

ಕಾರ್ಯಕರ್ತರ ಪಕ್ಷ ಎಂದು ಹೆಸರುವಾಸಿಯಾಗಿದ್ದ ಭಾರತೀಯ ಜನತಾ ಪಕ್ಷ ಈಗ ಕುಟುಂಬ ರಾಜಕಾರಣದಲ್ಲಿ ಮುಳುಗಿರುವುದು ವಿಷಾದನೀಯ. ಪಕ್ಷದ ವಿರುದ್ಧ ಬಹಿರಂಗವಾಗಿ ಮಾತನಾಡಿ ಹಾಗೂ ಆಡಳಿತಾರೂಢ ಪಕ್ಷದ ಸಭೆಯಲ್ಲಿ ಭಾಗವಹಿಸುತ್ತಿದ್ದ ಶಾಸಕರ ಉಚ್ಚಾಟನೆ ಮಾಡದೆ ಉತ್ತರ ಕರ್ನಾಟಕದ ಭಾಗದಲ್ಲಿ ಪಕ್ಷದ ಬಲವರ್ಧನೆಗೆ ಟೊಂಕಕಟ್ಟಿ ಕೆಲಸ ಮಾಡಿದ ನನ್ನಂತವರಿಗೆ ಉಚ್ಚಾಟನೆ ಮಾಡುವುದು ಪಕ್ಷದ ದ್ವಂದ್ವ ನೀತಿಗಳಿಗೆ ಹಿಡಿದ ಕೈಗನ್ನಡಿ.

ಕಲ್ಯಾಣ ಕರ್ನಾಟಕದಲ್ಲಿ ಸಧೃಡವಾಗಿದ್ದ ಪಕ್ಷ ಲೋಕ ಸಭಾ ಚುನಾವಣೆಯಲ್ಲಿ ಮಕಾಡೆ ಮಲಗಿದ್ದು ಯಾರ ‘ಅಡ್ಡಸ್ಟೆಂಟ್ ರಾಜಕಾರಣದಿಂದ’ ಎಂದು ಪಕ್ಷದ ಪ್ರಮುಖರು ವಿಶ್ಲೇಷಿಸಲಿ. ಬಿ.ಬಿ.ಶಿವಪ್ಪ, ಮಲ್ಲಿಕಾರ್ಜುನಪ್ಪ, ಡಾ ವಿ.ಎಸ.ಆಚಾರ್ಯರು ಸೇರಿದಂತೆ ಪಕ್ಷದ ಅನೇಕ ಧುರೀಣರು, ಸಾವಿರಾರು ಕಾರ್ಯಕರ್ತರು ಪಕವನ್ನು ಸಂಘಟಿಸಿದ ಪರಿಣಾಮದಿಂದಲೇ ಪಕ್ಷ ರಾಜ್ಯದಲ್ಲಿ ಅಧಿಕಾರದ ಚುಕ್ಕಾಣಿ ಹಿಡಿಯಲು ಸಾಧ್ಯವಾಗಿದ್ದು. ಬಿಡಿಗಾಸಿಲ್ಲದೇ, ಕಾರ್ಯಕರ್ತರ ಓಡಾಟ, ಉಪಹಾರಕ್ಕೂ ಹಣವಿಲ್ಲದಿರುವ ಕಾಲಘಟ್ಟದಲ್ಲಿ ದಿವಂಗತ ಮಲ್ಲಿಕಾರ್ಜುನಪ್ಪನವರು ತಮ್ಮ ಸ್ವಂತ ಸಂಪನ್ಮೂಲದಿಂದ ಪಕ್ಷವನ್ನು ಮುನ್ನಡೆಸಿ ಕಾರ್ಯಕರ್ತರ ಮನೋಬಲವನ್ನು ಹೆಚ್ಚಿಸಿ ಸಂಘಟನೆಗೆ ಕಾರಣವಾದರು. ಮಾತು ಕಡಿಮೆಯಾದರೂ ತಮ್ಮ ಕೆಲಸದಿಂದ ಕರಾವಳಿಯಲ್ಲಿ ಪಕ್ಷವನ್ನು ಸಂಘಟಿಸಿದ್ದು ಪಕ್ಷ ಮರೆಯಲಾಗದ ಮಾಣಿಕ್ಯ ಡಾ. ವಿ.ಎಸ್.ಆಚಾರ್ಯರು. ಆಯಕಟ್ಟಿನ ಸ್ಥಾನದಲ್ಲಿದ್ದರೂ ಆಚಾರ್ಯರ ಕುಟುಂಬದವರು ಯಾರೂ ಸಹ ರಾಜಕಾರಣಕ್ಕೆ ಬರಲಿಲ್ಲ ಎಂಬುದು ಹಲವರಿಗೆ ಗೊತ್ತಿಲ್ಲ.

ಹಿಂದುತ್ವವಾದ ಬಗ್ಗೆ ರಾಜಿ ಮಾಡಿಕೊಳ್ಳದೆ, ಕುಟುಂಬ ರಾಜಕಾರಣದ ವಿರುದ್ಧ ಧ್ವನಿ ಎತ್ತಿದ್ದಕ್ಕಾಗಿ ರಾಜ್ಯದಲ್ಲಿ ಪಕ್ಷವನ್ನು ಕಟ್ಟಿದ್ದ ಈಶ್ವರಪ್ಪನವರನ್ನು ಹೊರಗಿಟ್ಟರು. ನಿಸ್ವಾರ್ಥ ಕಾರ್ಯಕರ್ತರು, ತನು-ಮನ-ಧನದಿಂದ ದುಡಿದ ಮುಖಂಡರಿಂದ ಪಕ್ಷದ ಸಂಘಟನೆಯಾಯಿತೇ ಹೊರತು ಸ್ವಯಂಘೋಷಿತ ‘ಪೂಜ್ಯ’ ರಿಂದಲ್ಲ. ರಾಜ್ಯದಲ್ಲಿ ಪ್ರ ಪ್ರಥಮ ಬಾರಿಗೆ ವಕ್ಸ್ ಹೋರಾಟಕ್ಕೆ ಧರಣಿ ಸತ್ಯಾಗ್ರಹವನ್ನು ಪ್ರಾರಂಭಿಸಿದ್ದು ನಾವೇ, ವಾಲ್ಮೀಕಿ ಹಗರಣ, ದಲಿತರಿಗೆ SCSP/TSP ಅನುದಾನದ ದುರ್ಬಳಕೆಯನ್ನು ಖಂಡಿಸಿದ್ದು, ಹೋರಾಟ ರೂಪಿಸಿದ್ದು, ವಕ್ಸ್ ವಿರುದ್ಧ ನಾವು ಮಾಡಿದ್ದ ಮಾಹಿತಿ ಸಂಗ್ರಹಕ್ಕೆ ಜೆ.ಪಿ.ಸಿ ಅಧ್ಯಕ್ಷರಾದ ಶ್ರೀ ಜಗದಂಬಿಕಾ ಪಾಲ್ ಅವರು ಪ್ರಶಂಸಿಸಿದ್ದರು.

ಪ್ರತಿ ಬಾರಿ ಅಧಿವೇಶನ ನಡೆದಾಗಲೂ ಉತ್ತರ ಕರ್ನಾಟಕಕ್ಕೆ ಆಗುತ್ತಿರುವ ಮಲತಾಯಿ ಧೋರಣೆಯನ್ನು, ಕೃಷ್ಣ ಯೋಜನೆಯ ವಿಳಂಬದ ಬಗ್ಗೆ ಧ್ವನಿ ಎತ್ತಿದ್ದು ನಾವೇ, ಕರ್ನಾಟಕ ಲೋಕ ಸೇವಾ ಆಯೋಗದಲ್ಲಿರುವ ಭ್ರಷ್ಟರನ್ನು ಕಿತ್ತೊಗೆಯಲು ಸ್ಪರ್ಧಾರ್ಥಿಗಳ ಜೊತೆಗೆ ನಿಂತಿದ್ದು ನಾವೇ. ಬಾಣಂತಿಯರ ಸಾವಿನ ಬಗ್ಗೆ ತನಿಖೆಯಾಗಬೇಕು ಎಂದು ಆಗ್ರಹಿಸಿದ್ದು ನಾನೇ. ಪಕ್ಷದಲ್ಲಿ ಆಗಬೇಕಾದ ಕೆಲ ಬದಲಾವಣೆಗಳು, ಸುಧಾರಣೆಗಳು ಸೂಚಿಸಿದಕ್ಕೆ ನಮ್ಮ ನಿಲುವು ಕೆಲವರಿಗೆ ‘ಅಪಥ್ಯ’ ವಾಗಿದೆ.

ಅಡ್ಡಸ್ಟೆಂಟ್ ರಾಜಕಾರಣ ನಿಲ್ಲದಿದ್ದರೆ ಪಕ್ಷ ಮಕಾಡೆ ಮಲಗುವುದು ಖಚಿತ. ಕುಟುಂಬ ರಾಜಕಾರಣಕ್ಕೆ ಕಡಿವಾಣ ಹಾಕಿ, ನಿಜವಾದ ಜನ ಪರ ಕಾಳಜಿ ಇರುವ ನಾಯಕರಿಗೆ ಪಕ್ಷ ಅವಕಾಶ ನೀಡಬೇಕು. ಕಾಟಾಚಾರಕ್ಕೆ ಸರ್ಕಾರದ ನೀತಿಗಳನ್ನು ಖಂಡಿಸಿ ಸಂಜೆ ವೇಳೆ ಅವರ ಮನೆಯಲ್ಲಿ ಭೋಜನ ಕೂಟದಲ್ಲಿ ಭಾಗವಹಿಸುವ ನಾಯಕರ ಅವಶ್ಯ ಪಕ್ಷಕ್ಕಿಲ್ಲ. Nation First, Party next, Self last : ಎಂಬ ತತ್ವದಡಿ ಕೆಲಸ ಮಾಡುವ ಎಂಬ ನನ್ನ ನೀತಿಯಲ್ಲಿ ಯಾವುದೇ ಬದಲಾವಣೆ ಇಲ್ಲ ಎಂದು ಹೇಳಿದ್ದಾರೆ.

Basanagouda Patil Yatnal tweets, "The party's poor performance in the Lok Sabha elections is attributed to internal politics and the failure of the leadership to assess defeats in key regions like Kalburgi, Raichur, Bellary, and Chikkodi. Once known as a party of workers, the BJP… pic.twitter.com/U5CZa14TTp

— ANI (@ANI) March 27, 2025

BREAKING: BJP's downfall is certain due to sidelined politics: MLA Yatnal Kidi on the back of expulsion!
Share. Facebook Twitter LinkedIn WhatsApp Email

Related Posts

ಈ ರೈಲುಗಳ ಸೇವೆ ಮರುಸ್ಥಾಪನೆ, ಪರಿಷ್ಕರಣೆ

1 Min Read

BREAKING: ರಾಜ್ಯ ಸರ್ಕಾರದಿಂದ ಜನತೆಗೆ ಮತ್ತೊಂದು ಶಾಕ್: ‘ಭೂದಾಖಲೆ’ಗಳ ನಕಲು ಶುಲ್ಕ ಹೆಚ್ಚಳ

2 Mins Read

ಬೆಂಗಳೂರಿನಲ್ಲಿ ಭೀಕರ ದುರಂತ: ಶೆಡ್‌ಗೆ ಬೆಂಕಿ ಬಿದ್ದು ಇಬ್ಬರು ಕಂದಮ್ಮಗಳು ಜೀವಂತ ದಹನ!

1 Min Read
Recent News

ಚೀನಾ ಪ್ರವಾಸಕ್ಕೂ ಮುನ್ನ ಟ್ರಂಪ್ ‘ವಾರ್’ ಎಚ್ಚರಿಕೆ: ಇರಾನ್ ಕಳುಹಿಸಿದ ಕದನ ವಿರಾಮ ಪ್ರಸ್ತಾವನೆ ತಿರಸ್ಕರಿಸಿದ ಅಮೆರಿಕ!

ಹಾರ್ಮುಜ್ ಜಲಸಂಧಿಯಲ್ಲಿ ಹೈಡ್ರಾಮಾ: ಇರಾನ್ ಸಂಬಂಧಿತ ಎಲ್‌ಪಿಜಿ ಟ್ಯಾಂಕರ್‌ನಿಂದ ‘ಭಾರತೀಯ ಮಾಲೀಕತ್ವ’ದ ಸಂಕೇತ; ದಾಳಿ ತಪ್ಪಿಸಲು ಹೊಸ ತಂತ್ರ?

ಎಂದಿಗೂ ಹಾಳಾಗದ ’10 ಆಹಾರ ಪದಾರ್ಥ’ಗಳಿವು

ಐಸ್‌ಕ್ರೀಮ್ ತಿಂದ ತಕ್ಷಣ ರಕ್ತದಲ್ಲಿನ ಸಕ್ಕರೆ ಮಟ್ಟ ಏನಾಗುತ್ತದೆ? ಸಿಹಿ ಪ್ರಿಯರೇ ಎಚ್ಚರ, ಇಲ್ಲಿವೆ ಆಘಾತಕಾರಿ ಸತ್ಯಗಳು!

State News
KARNATAKA

ಈ ರೈಲುಗಳ ಸೇವೆ ಮರುಸ್ಥಾಪನೆ, ಪರಿಷ್ಕರಣೆ

By ವಸಂತ ಬಿ ಈಶ್ವರಗೆರೆ KARNATAKA 1 Min Read

ಮೈಸೂರು: ಸುಬ್ರಹ್ಮಣ್ಯ ರಸ್ತೆ – , ಎಡಮಂಗಲ ವಿಭಾಗಗಳ ನಡುವೆ ಹಳಿ ನಿರ್ವಹಣಾ ಕಾಮಗಾರಿಗಳಿಗಾಗಿ ಮೊದಲು ನಿಯಂತ್ರಣ ಹಾಗೂ ಮರುನಿಗದಿಪಡಿಸಲಾಗಿದ್ದ ಕೆಳಕಂಡ…

BREAKING: ರಾಜ್ಯ ಸರ್ಕಾರದಿಂದ ಜನತೆಗೆ ಮತ್ತೊಂದು ಶಾಕ್: ‘ಭೂದಾಖಲೆ’ಗಳ ನಕಲು ಶುಲ್ಕ ಹೆಚ್ಚಳ

ಬೆಂಗಳೂರಿನಲ್ಲಿ ಭೀಕರ ದುರಂತ: ಶೆಡ್‌ಗೆ ಬೆಂಕಿ ಬಿದ್ದು ಇಬ್ಬರು ಕಂದಮ್ಮಗಳು ಜೀವಂತ ದಹನ!

ಅಂಜನಾದ್ರಿಗೆ ದೇಣಿಗೆಯಾಗಿ ಬಂದ ಆಭರಣಗಳು ಚಿನ್ನ ಲೇಪಿತ: ಉದ್ಯಮಿಯಿಂದ 2.50 ಕೋಟಿ ಖರೀದಿಯ ಬಿಲ್ ರಿಲೀಸ್

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.