ಬೆಂಗಳೂರು: ಸೋಷಿಯಲ್ ಮೀಡಿಯಾದಲ್ಲಿ ಜನಪ್ರಿಯಳಾಗಿರುವ ಕಿಪ್ಪಿ ಕೀರ್ತಿ ತನ್ನ ಪ್ರಿಯತಮನ ವಿರುದ್ಧ ದೂರು ದಾಖಲಿಸಿದ್ದಾಳೆ.
ಹೌದು, ಖಾಸಗಿ ಫೋಟೋಗಳನ್ನು ಇಟ್ಟುಕೊಂಡು ಬ್ಲಾಕ್ ಮೇಲ್ ಮಾಡಿದ ಆರೋಪದ ಹಿನ್ನೆಲೆಯಲ್ಲಿ ಬ್ಯಾಡರಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಿಯತಮ ಮುತ್ತು ಹಾಗೂ ಆತನ ಸ್ನೇಹಿತ ದಚ್ಚು ಎಂಬಾತನ ವಿರುದ್ಧ ಕಿಪ್ಪಿ ಕೀರ್ತಿ ದೂರು ದಾಖಲಿಸಿದ್ದಾಳೆ.
ಸದ್ಯ ಈ ಸಂಬಂಧ ಬ್ಯಾಡರಹಳ್ಳಿ ಪೊಲೀಸ್ ಠಾಣೆಯಲ್ಲಿ ಎನ್‌ಸಿಆರ್ ದಾಖಲಾಗಿದೆ. ಕಿಪ್ಪಿ ಕೀರ್ತಿ ಹಾಗೂ ಸ್ನೇಹಿತರನ್ನು ಠಾಣೆಗೆ ಕರೆಸಿದ ಪೊಲೀಸರು ಮತ್ತೆ ಈ ರೀತಿ ಮಾಡಬೇಡಿ ಎಂದು ಬುದ್ಧಿವಾದ ಹೇಳಿ ಕಳುಹಿಸಿದ್ದಾರೆ ಎನ್ನಲಾಗಿದೆ.