ಭಂಡಾರಾ : ಮಹಾರಾಷ್ಟ್ರದ ಭಂಡಾರಾ ಜಿಲ್ಲೆಯ ಆರ್ಡಿನೆನ್ಸ್ ಫ್ಯಾಕ್ಟರಿಯಲ್ಲಿ ಶುಕ್ರವಾರ ಬೆಳಗ್ಗೆ ಸ್ಫೋಟ ಸಂಭವಿಸಿದೆ. ಈ ದುರ್ಘಟನೆಯಲ್ಲಿ ಎಂಟು ಮಂದಿ ಸಾವನ್ನಪ್ಪಿದ್ದು, ಏಳು ಮಂದಿ ಚಿಂತಾಜನಕ ಸ್ಥಿತಿಯಲ್ಲಿ ಆಸ್ಪತ್ರೆಗೆ ದಾಖಲಾಗಿದ್ದಾರೆ.
ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಅವರು, ಪ್ರಾಥಮಿಕ ಮಾಹಿತಿಯ ಪ್ರಕಾರ, ಶಸ್ತ್ರಾಸ್ತ್ರ ಕಾರ್ಖಾನೆಯಲ್ಲಿನ ಸ್ಫೋಟದಿಂದಾಗಿ ಘಟಕದ ಮೇಲ್ಛಾವಣಿ ಕುಸಿದು ಹಲವು ಕಾರ್ಮಿಕರು ಸಿಕ್ಕಿಬಿದ್ದಿದ್ದಾರೆ. ಇನ್ನು ಈ ಸ್ಫೋಟದಲ್ಲಿ ಪ್ರಾಣ ಕಳೆದುಕೊಂಡವರಿಗೆ ಸಂತಾಪ ಸೂಚಿಸಿದರು.
ಭಂಡಾರಾದಲ್ಲಿರುವ ಆರ್ಡನೆನ್ಸ್ ಫ್ಯಾಕ್ಟರಿಯಲ್ಲಿ ಭಾರೀ ಸ್ಫೋಟ ಸಂಭವಿಸಿದೆ ಎಂದು ಕೇಂದ್ರ ಸಚಿವ ನಿತಿನ್ ಗಡ್ಕರಿ ಹೇಳಿದ್ದಾರೆ. ಪ್ರಾಥಮಿಕ ಮಾಹಿತಿಯ ಪ್ರಕಾರ, ಈ ಘಟನೆಯಲ್ಲಿ 8 ಜನರು ಸಾವನ್ನಪ್ಪಿದ್ದಾರೆ ಮತ್ತು 7 ಜನರು ಗಾಯಗೊಂಡಿದ್ದಾರೆ. ಗಡ್ಕರಿ ಅವರು ಒಂದು ನಿಮಿಷ ಮೌನ ಆಚರಿಸುವ ಮೂಲಕ ಪ್ರಾಣ ಕಳೆದುಕೊಂಡವರಿಗೆ ಶ್ರದ್ಧಾಂಜಲಿ ಸಲ್ಲಿಸಿದರು. ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರು ಟ್ವೀಟ್ ಮಾಡಿ, ಘಟನೆಯ ಬಗ್ಗೆ ತಿಳಿದು ತುಂಬಾ ದುಃಖವಾಯಿತು. ಸ್ಥಳದಲ್ಲಿ ರಕ್ಷಣಾ ತಂಡಗಳನ್ನ ನಿಯೋಜಿಸಲಾಗಿದೆ. ಸಂತ್ರಸ್ತರಿಗೆ ನೆರವು ನೀಡಲು ಎಲ್ಲಾ ಪ್ರಯತ್ನಗಳನ್ನ ಮಾಡಲಾಗುತ್ತಿದೆ. ಬದುಕುಳಿದವರನ್ನ ಹುಡುಕಲು ರಕ್ಷಣಾ ಮತ್ತು ವೈದ್ಯಕೀಯ ತಂಡಗಳನ್ನ ಸ್ಥಳದಲ್ಲಿ ನಿಯೋಜಿಸಲಾಗಿದೆ ಎಂದು ರಕ್ಷಣಾ ವಕ್ತಾರರು ತಿಳಿಸಿದ್ದಾರೆ.
ಮಹಾರಾಷ್ಟ್ರದ ಶಸ್ತ್ರಾಸ್ತ್ರ ಕಾರ್ಖಾನೆಯಲ್ಲಿ ಭಾರಿ ಸ್ಫೋಟ:ಮುಂದುವರಿದ ರಕ್ಷಣಾ ಕಾರ್ಯಾಚರಣೆ | Blast
BREAKING : ‘ನಮ್ಮ ಮೆಟ್ರೋ’ ಪ್ರಯಾಣಿಕರಿಗೆ ಗುಡ್ ನ್ಯೂಸ್ : ಗಣರಾಜ್ಯೋತ್ಸವ ದಿನದಂದು ಹೆಚ್ಚುವರಿ ರೈಲು ಸಂಚಾರ!