ಬೆಂಗಳೂರು : ಬೆಂಗಳೂರಿನಲ್ಲಿ ಬಿಎಂಟಿಸಿ ಬಸ್ ಕಂಡಕ್ಟರ್ ಪ್ರಯಾಣಿಕನ ಮೇಲೆ ಮನಸ್ಸೋ ಇಚ್ಚೆ ಹಲ್ಲೆ ಮಾಡಿರುವ ಘಟನೆ ನಡೆದಿದೆ.
ಬೆಂಗಳೂರಿನಲ್ಲಿ ಮೊನ್ನೆ ಈ ಘಟನೆ ನಡೆದಿದ್ದು, ಶಿವಾಜಿನನಗರದಿಂದ ಎನ್.ಆರ್. ಕಾಲೋನಿಗೆ ಹೋಗುತ್ತಿದ್ದ ಬಿಎಂಟಿಸಿ ಬಸ್ ನಲ್ಲಿ ಪ್ರಯಾಣಿಕನಿಗೆ ಕಂಡಕ್ಟರ್ ಹಲ್ಲೆ ಮಾಡಿದ್ದು, ಸಾಮಾಜಿಕ ಜಾಲತಾಣದಲ್ಲಿ ಕಂಡಕ್ಟರ್ ನಡೆಗೆ ಭಾರೀ ಆಕ್ರೋಶ ವ್ಯಕ್ತವಾಗುತ್ತಿದೆ.
ರೂಟ್ ನಂಬರ್ 32 ರ ಬಸ್ ನಲ್ಲಿ ಬಿಎಂಟಿಸಿ ಬಸ್ ಕಂಡಕ್ಟರ್ ಪ್ರಯಾಣಿಕನಿಗೆ ಟಿಕೆಟ್ ಮಷಿನ್ ನಿಂದ ಮುಖಕ್ಕೆ ಗುದ್ದಿ ಹಲ್ಲೆ ಮಾಡಿದ್ದು, ಪ್ರಯಾಣಿಕ ಗಾಯಗೊಂಡಿದ್ದಾರೆ. ಸದ್ಯ ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಆರೋಪಿ ಕಂಡಕ್ಟರ್ ವಿರುದ್ಧ ಆಕ್ರೋಶ ವ್ಯಕ್ತವಾಗುತ್ತಿದೆ.