ಬೆಂಗಳೂರು : ಚಾಲಕನಿಗೆ ತಲೆ ಸುತ್ತು ಬಂದಿದ್ದರಿಂದ ಬಿಎಂಟಿಸಿ ಬಸ್ ಒಂದು ಮರಕ್ಕೆ ಡಿಕ್ಕಿ ಹೊಡೆದ ಘಟನೆ ಬೆಂಗಳೂರಿನ ಆರ್ ಟಿ ನಗರ ಠಾಣಾ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ.
ಕೊನೆಯ ಟ್ರಿಪ್ ಆಗಿದ್ದರಿಂದ ಈ ವೇಳೆ ಬಸ್ ನಲ್ಲಿ 15 ಪ್ರಯಾಣಿಕರು ಸಂಚರಿಸುತ್ತಿದ್ದರು ಇದೆ ವೇಳೆ 3 ಪ್ರಯಾಣಿಕರಿಗೆ ಸಣ್ಣ ಪುಟ್ಟ ಗಾಯಗಳಾಗಿದ್ದು, ಅದೃಷ್ಟವಶಾತ್ ಯಾವುದೇ ರೀತಿಯಾದಂತಹ ಪ್ರಾಣಾಯಪಾಯ ಸಂಭವಿಸಿಲ್ಲ.
ಬಸ್ ಚಾಲನೆ ವೇಳೆ ಚಾಲಕನಿಗೆ ತಲೆ ಸುತ್ತು ಬಂದ ಹಿನ್ನೆಲೆ ಮರಕ್ಕೆ ಡಿಕ್ಕಿಯಾಗಿ ಅಪಘಾತ ಸಂಭವಿಸಿದೆ. ಆರ್ ಟಿ ನಗರ ಸಂಚಾರ ಪೊಲೀಸ್ ಠಾಣೆಯಲ್ಲಿ ಘಟನೆ ಕುರಿತಂತೆ ಪ್ರಕರಣ ದಾಖಲಾಗಿದೆ.
ಇ ವೇಳೆ ಮೂರು ಜನರಿಗೆ ಸಣ್ಣ ಪುಟ್ಟ ಗಾಯಗಳಾಗಿದ್ದು, ಆಸ್ಪತ್ರೆಯಿಂದ ಚಿಕಿತ್ಸೆ ನೀಡಿ ಡಿಸ್ಚಾರ್ಜ್ ಮಾಡಲಾಗಿದೆ. ಚಾಲಕನಿಗೆ ತಲೆ ಸುತ್ತು ಬಂದಿದ್ದರಿಂದ ಮರಕೆ ಡಿಕ್ಕಿ ಹೊಡೆದಿದೆ. ಬಸ್ಸಿನ ಲಾಸ್ಟ್ ಟ್ರಿಪ್ ಆಗಿರುವುದರಿಂದ ಕೇವಲ 15 ಜನ ಮಾತ್ರ ಪ್ರಯಾಣಿಕರು ಸಂಚರಿಸುತ್ತಿದ್ದರು ಎಂದು ಹೇಳಲಾಗುತ್ತಿದೆ.