ಬೆಂಗಳೂರು: ಬೆಂಗಳೂರಿನಲ್ಲಿ ಪ್ರಯಾಣಿಕನೊಬ್ಬ ಬಿಎಂಟಿಸಿ ಕಂಡಕ್ಟರ್ ಗೆ ಚಾಕುವಿನಿಂದ ಇರಿದು ಹಲ್ಲೆಗೊಳಿಸಿರುವಂತ ಘಟನೆಗೆ ಸಂಬಂಧಿಸಿದಂತೆ ಇದೀಗ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.
ಬೆಂಗಳೂರಿನ ವೈಟ್ ಫೀಲ್ಡ್ ನ ಐಟಿಪಿಎಲ್ ಬಸ್ ನಿಲ್ದಾಣದಲ್ಲಿ ಇಂದು ಬಿಎಂಟಿಸಿ ವೋಲ್ವೋ ಬಸ್ ಕಂಡಕ್ಟರ್ ಯೋಗೇಶ್ ಎಂಬುವರಿಗೆ ಪ್ರಯಾಣಿಕನೊಬ್ಬ ಚಾಕುವಿನಿಂದ ಇರಿದು ಹಲ್ಲೆಗೊಳಿಸಲಾಗಿತ್ತು. ಪ್ರಕರಣ ಸಂಬಂಧ ಜಾರ್ಖಂಡ್ ಮೂಲದ ಹರ್ಷ ಸಿನ್ಹಾ ಎಂಬುವನು ಕೃತ್ಯವೆಸಗಿದ್ದು, ಆರೋಪಿಯನ್ನು ವೈಟ್ ಫೀಲ್ಡ್ ಪೊಲೀಸರು ಬಂಧಿಸಿದ್ದಾರೆ.
ಪ್ರಯಾಣಿಕರಿನಂದ ಚಾಕು ಇರಿತಕ್ಕೆ ಒಳಗಾದಂತ ಬಿಎಂಟಿಸಿ ವೋಲ್ವೋ ಬಸ್ ಕಂಡಕ್ಟರ್ ಯೋಗೇಶ್ ಅವರನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.