ಮೈಸೂರು : ನಿನ್ನೆ ತಾನೆ ಮೈಸೂರಿನಲ್ಲಿ ಉದ್ಯಮಿಯೊಬ್ಬ ಹೆಂಡತಿ, ಮಗ ಹಾಗು ತಾಯಿಯನ್ನು ಕೊಂದು ತಾನು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿತ್ತು. ಇದೀಗ ಈ ಒಂದು ಘಟನೆ ಮಾಸುವ ಮುನ್ನವೇ, ಮೈಸೂರಿನಲ್ಲಿ ಓರ್ವ ಪುರುಷ ಹಾಗೂ ಮಹಿಳೆಯ ಶವ ಪತ್ತೆಯಾಗಿದ್ದು, ಇವರಿಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ಇದೀಗ ವ್ಯಕ್ತವಾಗುತ್ತಿದೆ.
ಹೌದು ಮೈಸೂರಿನ ವಿಜಯನಗರ ಮೈದಾನದಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಇಬ್ಬರ ಶವ ಪತ್ತೆಯಾಗಿದೆ. ನೇಣು ಬಿಗಿದ ಸ್ಥಿತಿಯಲ್ಲಿ ಪುರುಷ ಹಾಗೂ ಮಹಿಳೆಯ ಶವ ಪತ್ತೆಯಾಗಿದ್ಫು, ಇಬ್ಬರೂ ಸಹ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ಇದೀಗ ವ್ಯಕ್ತವಾಗುತ್ತಿದೆ. ಆದರೆ ಮೃತ ಪುರುಷ ಹಾಗೂ ಮಹಿಳೆಯ ಗುರುತು ಇದುವರೆಗೂ ಪತ್ತೆಯಾಗಿಲ್ಲ ಸ್ಥಳಕ್ಕೆ ವಿಜಯನಗರ ಠಾಣೆ ಪೊಲೀಸ್ರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.