ಮೈಸೂರು : ಮೈಸೂರಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಅಮ್ಮ ಮಗಳ ಮೃತ ದೇಹ ಪತ್ತೆಯಾಗಿದ್ದು, ಮೈಸೂರು ಜಿಲ್ಲೆಯ ನಂಜನಗೂಡು ತಾಲೂಕಿನ ಕೊತ್ತನಹಳ್ಳಿ ಮನೆಯಲ್ಲಿ ಅಮ್ಮ ಮಗಳ ಮೃತದೇಹಗಳು ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿವೆ.
ಮಹದೇವಮ್ಮ (40) ಹಾಗೂ ಮಗಳು ಸುಪ್ರಿಯ (20) ಶವ ಪತ್ತೆಯಾಗಿವೆ. ಮೈಸೂರು ಜಿಲ್ಲೆಯ ನಂಜನಗೂಡು ತಾಲೂಕಿನ ಕೊತ್ತನಹಳ್ಳಿ ಎಂಬ ಗ್ರಾಮದಲ್ಲಿ ತಾಯಿ ಮಗಳ ಶವ ಪತ್ತೆಯಾಗಿದೆ. ಪತಿ ಜಯರಾಮು ವಿರುದ್ಧ ವರದಕ್ಷಿಣೆ ಕಿರುಕುಳ ಆರೋಪ ಕೇಳಿ ಬಂದಿದ್ದು, ಪತಿ ಜಯರಾಮು ಕೊಲೆ ಮಾಡಿದ್ದಾನೆ ಎಂದು ಆರೋಪಿಸಲಾಗುತ್ತಿದೆ. ಕಳೆದ 22 ವರ್ಷಗಳ ಹಿಂದೆ ಜಯರಾಮ ಮತ್ತು ಮಹದೇವಮ್ಮ ವಿವಾಹವಾಗಿದ್ದರು.
ಪದೇ ಪದೇ ಪತಿ ಜಯರಾಮು ಪತ್ನಿಗೆ ಕಿರುಕುಳ ನೀಡುತ್ತಿದ್ದ. ಹಾಗಾಗಿ ಪತ್ನಿ ಮಹಾದೇವಮ್ಮ ಪತಿ ವಿರುದ್ಧ ಹಲವು ಬಾರಿ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ಇದೀಗ ಮನೆಯಲ್ಲಿ ಫ್ಯಾನಿಗೆ ನೇಣು ಬಿಗಿದ ಸ್ಥಿತಿಯಲ್ಲಿ ಇಬ್ಬರ ಶವಗಳು ಪತ್ತೆಯಾಗಿವೆ. ಘಟನೆ ಕುರಿತಂತೆ ಹುಲ್ಲಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ತನಿಖೆ ಕೈಗೊಂಡಿದ್ದಾರೆ.