ಬೆಂಗಳೂರು : ಬೆಂಗಳೂರಲ್ಲಿ ಭಾರಿ ಅನಾಹುತ ಒಂದು ತಪ್ಪಿದ್ದು, ಮಕ್ಕಳ ತಿಂಡಿ ತಯಾರಿಕಾ ಘಟಕದಲ್ಲಿ ಬಾಯ್ಲರ್ ಸ್ಪೋಟಗೊಂಡಿರುವ ಘಟನೆ ನಡೆದಿದೆ. ಬೆಳಿಗ್ಗೆ ಬಾಯ್ಲರ್ ರಿಪೇರಿ ಮಾಡುವ ವೇಳೆ ಬಾಯ್ಲರ್ ಸ್ಪೋಟಗೊಂಡಿದೆ.
ದಾಬಸ್ ಪೇಟೆಯ ಫಿಜೂ ಫುಡ್ ಪ್ರೊಡಕ್ಟ್ ಕಂಪನಿಯಲ್ಲಿ ಈ ಒಂದು ಘಟನೆ ಸಂಭವಿಸಿದ್ದು, ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ತಾಲೂಕಿನ ದಾಬಸ್ಪೇಟೆಯಲ್ಲಿ ಈ ಘಟನೆ ನಡೆದಿದೆ. ಸುಮಾರು 100 ಕಾರ್ಮಿಕರು ಕೆಲಸ ಮಾಡುತ್ತಿದ್ದರು ಎಂದು ತಿಳಿದುಬಂದಿದೆ.
ಅದೃಷ್ಟವಶಾತ್ ಘಟನೆಯಲ್ಲಿ ಯಾವುದೇ ಪ್ರಾಣಪಾಯ ಸಂಭವಿಸಿಲ್ಲ. ಸ್ಥಳಕ್ಕೆ ತಕ್ಷಣ ಅಗ್ನಿಶಾಮಕ ದಳ ಸಿಬ್ಬಂದಿ ಆಗಮಿಸಿ ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದೆ. ಘಟನೆ ಕುಡಿದಂತೆ ದಾಬಸ್ ಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.