ನವದೆಹಲಿ: ಹಿರಿಯ ನಟ ಮತ್ತು ಬಿಜೆಪಿ ಮುಖಂಡ ಮಿಥುನ್ ಚಕ್ರವರ್ತಿ ಅವರನ್ನು ಶನಿವಾರ ಬೆಳಿಗ್ಗೆ ಎದೆ ನೋವಿನ ಸಲುವಾಗಿ ಕೋಲ್ಕತ್ತಾದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ನಟನ ಹತ್ತಿರದ ಮೂಲಗಳು ನೀಡಿರುವ ಹೇಳಿಕೆ ಪ್ರಕಾರ ಅವರು ಅಸ್ವಸ್ಥರಾಗಿದ್ದರು, ನಂತರ ಅವರನ್ನು ಖಾಸಗಿ ಆಸ್ಪತ್ರೆಗೆ ಕರೆದೊಯ್ಯಲಾಯಿತು ಎಂದು ಹೇಳಿದ್ದಾರೆ.
ಅವರು ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಮೂಲಗಳು ತಿಳಿಸಿವೆ. ಅವರಿಗೆ ಇತ್ತೀಚೆಗೆ ಪ್ರತಿಷ್ಠಿತ ಪದ್ಮಭೂಷಣ ಪ್ರಶಸ್ತಿ ನೀಡಿ ಗೌರವಿಸಲಾಗಿದೆ.
ಈ ಸುದ್ದಿ ಈಗಷ್ಟೇ ಬಂದಿದೆ ಹೆಚ್ಚಿನ ಮಾಹಿತಿ ಪಡೆದ ತಕ್ಷಣ, ನಾವು ಈ ಪುಟದಲ್ಲಿ ಹೆಚ್ಚಿನ ಮಾಹಿತಿಯನ್ನು ನವೀಕರಣ ಮಾಡುತ್ತೇವೆ, ಸ್ವಲ್ಪ ಸಮಯದ ನಂತರ ಪುನಃ ಈ ಪುಟಕ್ಕೆ ಭೇಟಿ ನೀಡಿ