ಕರಾಚಿ : ಪಾಕಿಸ್ತಾನದ ವಾಯುವ್ಯ ಖೈಬರ್ ಪಖ್ತುಂಖ್ವಾ ಪ್ರಾಂತ್ಯದಲ್ಲಿ ಶನಿವಾರ ನಡೆದ ಕ್ರಿಕೆಟ್ ಪಂದ್ಯದ ವೇಳೆ ಸಂಭವಿಸಿದ ಸ್ಫೋಟದಲ್ಲಿ ಕನಿಷ್ಠ ಒಬ್ಬರು ಸಾವನ್ನಪ್ಪಿದ್ದು, ಹಲವರು ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ.
ಪಾಕಿಸ್ತಾನದ ಖೈಬರ್ ಪಖ್ತುಂಖ್ವಾ ಪ್ರಾಂತ್ಯದ ಬನ್ನುವಿನಲ್ಲಿರುವ ಫ್ರಾಂಟಿಯರ್ ಕಾನ್‌ಸ್ಟಾಬ್ಯುಲರಿ (ಎಫ್‌ಸಿ) ಪ್ರಧಾನ ಕಚೇರಿಯ ಮೇಲೆ ಉಗ್ರಗಾಮಿ ದಾಳಿಯ ನಂತರ, ಹಿನ್ನೆಲೆಯಲ್ಲಿ ಹಾನಿಗೊಳಗಾದ ಅಂಗಡಿಗಳನ್ನ ಹೊಂದಿರುವ ಬೀದಿಯಲ್ಲಿ ಪೊಲೀಸ್ ಅಧಿಕಾರಿಯೊಬ್ಬರು ಕಾವಲು ಕಾಯುತ್ತಿದ್ದಾರೆ.
ಬಜೌರ್ ಜಿಲ್ಲೆಯ ಖಾರ್ ತೆಹ್ಸಿಲ್‌ನಲ್ಲಿರುವ ಕೌಸರ್ ಕ್ರಿಕೆಟ್ ಮೈದಾನದಲ್ಲಿ ಸ್ಫೋಟ ಸಂಭವಿಸಿದೆ.
ಬಜೌರ್ ಜಿಲ್ಲಾ ಪೊಲೀಸ್ ಅಧಿಕಾರಿ ವಕಾಸ್ ರಫೀಕ್ ಮಾಹಿತಿಯ ಪ್ರಕಾರ, ಸ್ಫೋಟವು ಗುರಿಯಾಗಿಸಿಕೊಂಡು ನಡೆಸಲಾದ ದಾಳಿಯಾಗಿದ್ದು, ಸುಧಾರಿತ ಸ್ಫೋಟಕ ಸಾಧನ (ಐಇಡಿ) ಮೂಲಕ ಇದನ್ನು ನಡೆಸಲಾಗಿದೆ. ಸ್ಫೋಟದಲ್ಲಿ ಒಬ್ಬ ವ್ಯಕ್ತಿ ಸಾವನ್ನಪ್ಪಿದ್ದು, ಮಕ್ಕಳು ಸೇರಿದಂತೆ ಹಲವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.
ಶಿವ ಭಕ್ತರಿಗೆ ಸಿಹಿ ಸುದ್ದಿ ; ಭಾರತ ಸೇರಿ 140 ದೇಶಗಳಿಗೆ ‘ಬದರಿನಾಥ-ಕೇದಾರನಾಥ ಪ್ರಸಾದ’
ಶಿವ ಭಕ್ತರಿಗೆ ಸಿಹಿ ಸುದ್ದಿ ; ಭಾರತ ಸೇರಿ 140 ದೇಶಗಳಿಗೆ ‘ಬದರಿನಾಥ-ಕೇದಾರನಾಥ ಪ್ರಸಾದ’