ಹೈದರಾಬಾದ್:ನೆದರ್ಲ್ಯಾಂಡ್ಸ್ ನಿಂದ ಹೈದರಾಬಾದ್‌ಗೆ ಆಗಮಿಸುತ್ತಿದ್ದ ಜಾಗತಿಕ ವಿಮಾನ ಸಂಸ್ಥೆಯೊಂದಕ್ಕೆ ಇಮೇಲ್ ಮೂಲಕ ಬಾಂಬ್ ಬೆದರಿಕೆ ಬಂದ ಹಿನ್ನೆಲೆಯಲ್ಲಿ, ಇಲ್ಲಿನ ಶಂಷಾಬಾದ್‌ನಲ್ಲಿರುವ ರಾಜೀವ್ ಗಾಂಧಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ (RGIA) ತೀವ್ರ ಆತಂಕದ ವಾತಾವರಣ ನಿರ್ಮಾಣವಾಗಿದೆ. ಮುನ್ನೆಚ್ಚರಿಕಾ ಕ್ರಮವಾಗಿ ವಿಮಾನ ನಿಲ್ದಾಣದಲ್ಲಿ ಹೈ ಅಲರ್ಟ್ ಘೋಷಿಸಲಾಗಿದೆ.
ವಿಮಾನ ನಿಲ್ದಾಣದ ಅಧಿಕಾರಿಗಳ ಪ್ರಕಾರ, ನೆದರ್ಲ್ಯಾಂಡ್ಸ್‌ನಿಂದ ಹೊರಟಿದ್ದ ವಿಮಾನದಲ್ಲಿ ಬಾಂಬ್ ಇಡಲಾಗಿದೆ ಎಂದು ಅಪರಿಚಿತ ವ್ಯಕ್ತಿಗಳು ಇಮೇಲ್ ಕಳುಹಿಸಿದ್ದರು. ವಿಷಯ ತಿಳಿಯುತ್ತಿದ್ದಂತೆ ಅಲರ್ಟ್ ಆದ ವಿಮಾನ ನಿಲ್ದಾಣದ ಅಧಿಕಾರಿಗಳು ಮತ್ತು ಭದ್ರತಾ ಸಿಬ್ಬಂದಿ ತಕ್ಷಣವೇ ಕಾರ್ಯಪ್ರವೃತ್ತರಾಗಿದ್ದಾರೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.








